ಸಂಪಾಜೆ:ಶ್ರೀ ಶಿರಾಡಿ ದೇವಸ್ಥಾನಕ್ಕೆ ಎ.ಎಸ್ ಪೊನ್ನಣ್ಣ ಭೇಟಿ
ಸಂಪಾಜೆ:ಗ್ರಾಮದ, ಶ್ರೀ ಶಿರಾಡಿ ದೇವಸ್ಥಾನಕ್ಕೆ, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭೇಟಿ ನೀಡಿದರು. ದೇವಸ್ಥಾನ ಜೀರ್ಣೋದ್ಧಾರ ಮಾಡಲು ಸ್ಥಳೀಯರು ಮನವಿ ಮಾಡಿದಾಗ ಶಾಸಕರು ಸ್ವಂದಿಸಿ ದೇವರ ಸೇವೆಗೆ ತನ್ನ ಕೈಲಾಗುವ ಸಹಾಯ ಮಾಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ್, ಸರಕಾರಿ ನಾಮ ನಿರ್ದೇಶಕ ಅಧ್ಯಕ್ಷರುಗಳು/ಸದಸ್ಯರುಗಳು, ಡಿಸಿಸಿ ಪ್ರಮುಖರು, ಬ್ಲಾಕ್ ಕಾಂಗ್ರೆಸ್ ಪ್ರಮುಖರು, ಸ್ಥಳೀಯ ಮುಖಂಡರುಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.