ಸಂಪಾಜೆ;ಭೀಕರ ರಸ್ತೆ ಅಪಘಾತದಲ್ಲಿ ಆಟೋ ಚಾಲಕ ಸಾವನ್ನಪ್ಪಿದ ಘಟನೆ; ಡಿಕ್ಕಿಪಡಿಸಿ ಪರಾರಿಯಾಗಿದ್ದ ಕಾರು ಚಾಲಕ ಪೊಲೀಸರ ವಶಕ್ಕೆ
admincoorgdaily

ಮಡಿಕೇರಿ;ಗುರುವಾರ ಮಧ್ಯಾಹ್ನ ಕೊಡಗು ಜಿಲ್ಲೆಯ ಗಡಿಭಾಗವಾದ ಸಂಪಾಜೆಯಲ್ಲಿ ಆಟೋ ರಿಕ್ಷಾಕ್ಕೆ ಹಿಂದಿನಿಂದ ಡಿಕ್ಕಿಸಿ ರಿಕ್ಷ ಚಾಲಕನ ಸಾವಿಗೆ ಕಾರಣವಾದ ಕಾರನ್ನು ಮಡಿಕೇರಿ ಸಮೀಪದ ಕಾಟಕೇರಿಯಲ್ಲಿ ಮಡಿಕೇರಿ ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಾರಲ್ಲಿದ್ದವರು ಮೈಸೂರು ಮೂಲದವದು ತಿಳಿದು ಬಂದಿದ್ದು ಅವರನ್ನು ಪೋಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.