ಸಂಪಾಜೆ:ಚಡಾವು ಬಳಿಯ ದುಗ್ಗಳ ಭಾಗದಲ್ಲಿ ಐದು ಲಕ್ಷರೂ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ರಸ್ತೆ ಉದ್ಘಾಟಿಸಿದ ಎ.ಎಸ್ ಪೊನ್ನಣ್ಣ

ಸಂಪಾಜೆ:ಚಡಾವು ಬಳಿಯ ದುಗ್ಗಳ ಭಾಗದಲ್ಲಿ ಐದು ಲಕ್ಷರೂ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ರಸ್ತೆ ಉದ್ಘಾಟಿಸಿದ ಎ.ಎಸ್ ಪೊನ್ನಣ್ಣ

ಸಂಪಾಜೆ: ಗ್ರಾಮದ ಚಡಾವು ಬಳಿಯ ದುಗ್ಗಳ ಭಾಗದಲ್ಲಿ, ನೂತನವಾಗಿ 5ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯ ಉದ್ಘಾಟನೆಯನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ್, ಸರಕಾರಿ ನಾಮ ನಿರ್ದೇಶಕ ಅಧ್ಯಕ್ಷರುಗಳು/ಸದಸ್ಯರುಗಳು, ಡಿಸಿಸಿ ಪ್ರಮುಖರು, ಬ್ಲಾಕ್ ಕಾಂಗ್ರೆಸ್ ಪ್ರಮುಖರು, ಸ್ಥಳೀಯ ಮುಖಂಡರುಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.