ಸಾಂತ್ವನ ಮಹಿಳಾ ಸಹಾಯವಾಣಿ; 5729 ಪ್ರಕರಣಗಳು ಇತ್ಯರ್ಥ

Apr 18, 2026 - 11:53
 0  95
ಸಾಂತ್ವನ ಮಹಿಳಾ ಸಹಾಯವಾಣಿ; 5729 ಪ್ರಕರಣಗಳು ಇತ್ಯರ್ಥ

ಮಡಿಕೇರಿ ಏ.17-ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2002 ರ ನವೆಂಬರ್, 04 ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊಂಡ ‘ಸಾಂತ್ವನ ಮಹಿಳಾ ಸಹಾಯವಾಣಿ’ ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿರುತ್ತದೆ. 

ಸಾಂತ್ವನ ಕೇಂದ್ರದಲ್ಲಿ ಈವರೆಗೆ 5755 ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, 5729 ಪ್ರಕರಣಗಳು ಇತ್ಯರ್ಥಗೊಂಡಿದೆ. 2025-26ನೇ ಆರ್ಥಿಕ ಸಾಲಿನಲ್ಲಿ 336 ಪ್ರಕರಣಗಳು ದಾಖಲಾಗಿ, 313 ಪ್ರಕರಣಗಳು ಇತ್ಯರ್ಥಗೊಂಡು ಹಿಂದಿನ ಸಾಲಿನ ಉಳಿಕೆ ಪ್ರಕರಣಗಳು ಸೇರಿ, ಉಳಿದ 26 ಪ್ರಕರಣಗಳು ಇತ್ಯರ್ಥದ ಹಂತದಲ್ಲಿದೆ. 

ಈವರೆಗೆ ವಿವಿಧ ಸ್ವರೂಪದ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ರೂ. 5,15,000 ಗಳನ್ನು ಸಾಂತ್ವನ ಕೇಂದ್ರ ಹಾಗೂ ನ್ಯಾಯಾಲಯದ ಮೂಲಕ ಫಲಾನುಭವಿಗಳಿಗೆ 2025-26ನೇ ಸಾಲಿನಲ್ಲಿ ಕೊಡಿಸಿಕೊಡಲಾಗಿದೆ. 

ಮಹಿಳಾ ಸಹಾಯವಾಣಿಯ ಪ್ರಯೋಜನ ಪಡೆದುಕೊಳ್ಳುವಂತೆ ಸಾಂತ್ವನ ಕೇಂದ್ರದ ಅಧ್ಯಕ್ಷರು ಬಿ.ಕೆ.ರವೀಂದ್ರ ರೈ ಹಾಗೂ ಪ್ರಧಾನ ಕಾರ್ಯದರ್ಶಿ ನಮಿತ ಆರ್.ರೈ ಅವರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ದೂ.ಸಂ. 9880985939(ಕಚೇರಿ) ನ್ನು ಸಂಪರ್ಕಿಸಬಹುದು ಎಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯ ಅಧ್ಯಕ್ಷರು ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0