ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರ್ವದೈವತ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು

ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರ್ವದೈವತ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು

ಗೋಣಿಕೊಪ್ಪ:ಸಮೀಪದ ಅರ್ವತೊಕ್ಲುವಿನ ಸರ್ವದೈವತ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ವಿಸ್ಮಿತ್ ಟಿ.ವಿ ಹಾಗೂ 8ನೇ ತರಗತಿಯ ವಿದ್ಯಾರ್ಥಿ ಸಿಯಾನ್ ರಹಮಾನ್ ಇವರು ಇತ್ತೀಚೆಗೆ ಕೊಡಗರಹಳ್ಳಿ ಶಾಂತಿನಿಕೇತನ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಕಾಡ್ಯಮಾಡ ಪ್ರಕಾಶ್ ಮೊಣ್ಣಪ್ಪ , ಮುಖ್ಯ ಶಿಕ್ಷಕಿ ಮನೆಯಪಂಡ ಶೀಲಾ ಬೋಪಣ್ಣ ಹಾಗು ಶಿಕ್ಷಕ ವೃಂದದವರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ ಎಂದು ತರಬೇತುದಾರರಾದ ನವೀನ್ ಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.