ವಿಭಾಗ ಮಟ್ಟದ ವಾಲಿಬಾಲ್ ಕ್ರೀಡಾಕೂಟಕ್ಕೆ ಆಯ್ಕೆಯಾದ ಸರ್ವದೈವತ ಬಾಲಕಿಯರ ತಂಡ
ಗೋಣಿಕೊಪ್ಪ: ಫಾತಿಮಾ ಪ್ರೌಢಶಾಲೆ ಕುಶಾಲನಗರದಲ್ಲಿ ನಡೆದ ಕೊಡಗು ಜಿಲ್ಲಾಮಟ್ಟದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ವಿರಾಜಪೇಟೆ ತಾಲೂಕನ್ನು ಪ್ರತಿನಿಧಿಸಿದ್ದ ಅರ್ವತ್ತೊಕ್ಲುವಿನ ಸರ್ವದೈವತಾ ಪ್ರೌಢಶಾಲೆಯ ಬಾಲಕಿಯರ ತಂಡ ಗೆಲುವು ಸಾಧಿಸಿ ಮಂಗಳೂರಿನಲ್ಲಿ ನಡೆಯಲಿರುವ ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ಪ್ರಮೋದ್ ಗೌಡ ತರಬೇತಿ ನೀಡಿರುದ್ದಾರೆ.