ಸರ್ವದೈವತಾ ಪ್ರೌಢಶಾಲೆಗೆ ಸತತವಾಗಿ ಎರಡನೆಯ ಬಾರಿಗೆ ಸಮಗ್ರ ಪ್ರಶಸ್ತಿಯ ಗರಿ

Feb 12, 2026 - 10:37
 0  348
ಸರ್ವದೈವತಾ ಪ್ರೌಢಶಾಲೆಗೆ ಸತತವಾಗಿ ಎರಡನೆಯ ಬಾರಿಗೆ ಸಮಗ್ರ ಪ್ರಶಸ್ತಿಯ ಗರಿ

ಗೋಣಿಕೊಪ್ಪ; ಕೊಡಗು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ವಿರಾಜಪೇಟೆ ತಾಲೂಕು ಇವರ ಸಂಯುಕ್ತ ಆಶ್ರಯದಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಪ್ರೌಢಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟದಲ್ಲಿ ಗೋಣಿಕೊಪ್ಪಲಿನ ಸರ್ವದೈವತ ಪ್ರೌಢಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ವಿವಿಧ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದುಕೊಂಡು ಈಗಾಗಲೇ ಜಿಲ್ಲಾಮಟ್ಟ, ವಿಭಾಗ ಮಟ್ಟ, ರಾಜ್ಯಮಟ್ಟವನ್ನು ಪ್ರತಿನಿಧಿಸಿದ್ದಾರೆ.

ಇದೀಗ ತಾಲೂಕು ಮಟ್ಟದ ಸಮಗ್ರ ಪ್ರಶಸ್ತಿಯನ್ನು ಸತತವಾಗಿ ಎರಡನೇಯ ಬಾರಿಗೆ ತನ್ನದಾಗಿಸಿಕೊಳ್ಳುವುದರ ಮೂಲಕ ಸರ್ವದೈವತದ ಕಿರೀಟಕ್ಕೆ ಮತ್ತೊಂದು ಗರಿಯನ್ನು ಸೇರಿಸಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ, ಶಿಕ್ಷಕ ವೃಂದ ಹರ್ಷ ವ್ಯಕ್ತಪಡಿಸಿದ್ದಾರೆ ಎಂದು ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಮೋದ್ ಗೌಡ ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0