ಸರ್ವದೈವತ ಪಿ.ಯು. ಕಾಲೇಜಿನ ಬಾಲಕರು ಥ್ರೋ ಬಾಲ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಸರ್ವದೈವತ ಪಿ.ಯು. ಕಾಲೇಜಿನ ಬಾಲಕರು ಥ್ರೋ ಬಾಲ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಪೊನ್ನಂಪೇಟೆ:ಸತತವಾಗಿ ನಾಲ್ಕನೇ ಬಾರಿಗೆ ಸರ್ವದೈವತ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಥ್ರೋಬಾಲ್ ಕ್ರೀಡೆಯಲ್ಲಿ ರಾಜ್ಯಮಟ್ಟಕ್ಕೆ ಲಗ್ಗೆಯಿಟ್ಟಿದೆ. ಕೊಡಗು ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಥ್ರೋಬಾಲ್ ಪಂದ್ಯಾಟ ಇಂದು ಕೂರ್ಗ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ಈ ಪಂದ್ಯಾಟದಲ್ಲಿ ವಿರಾಜಪೇಟೆ ತಾಲೂಕನ್ನು ಪ್ರತಿನಿಧಿಸಿದ ಸರ್ವದೈವತ ಪಿ.ಯು. ಕಾಲೇಜಿನ ಬಾಲಕರ ತಂಡ ಉತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

 ತಂಡದ ಯಶಸ್ಸಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಮೋದ್ ಗೌಡ ವಿದ್ಯಾರ್ಥಿಗಳಿಗೆ ನೀಡಿದ ನಿರಂತರ ತರಬೇತಿ ಮತ್ತು ಮಾರ್ಗದರ್ಶನ ಪ್ರಮುಖ ಕಾರಣವಾಗಿದೆ. ಈ ಸಾಧನೆಗೆ ಕಾಲೇಜು ಪ್ರಾಂಶುಪಾಲರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಅಭಿನಂದನೆಗಳನ್ನು ವ್ಯಕ್ತಪಡಿಸಿದ್ದಾರೆ.