ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರ್ವದೈವತಾ ಬಾಲಕಿಯರ ವಾಲಿಬಾಲ್ ತಂಡ
ಗೋಣಿಕೊಪ್ಪ: ಇಲ್ಲಿನ ಕೂರ್ಗ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕೊಡಗು ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿರಾಜಪೇಟೆ ತಾಲೂಕನ್ನು ಪ್ರತಿನಿಧಿಸಿದ್ದ ಅರ್ವತ್ತೊಕ್ಲುವಿನ ಸರ್ವದೈವತಾ ಕಾಲೇಜಿನ ಬಾಲಕಿಯರ ತಂಡ ಗೆಲುವು ಸಾಧಿಸಿ ರಾಮನಗರದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.ಹಾಗೆಯೇ ಬಾಲಕರ ಟೇಬಲ್ ಟೆನ್ನಿಸ್ ಪಂದ್ಯದಲ್ಲಿ ಕಾಲೇಜಿನ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ ಪ್ರಾಂಶುಪಾಲರು ಬೋಧಕ ಮತ್ತು ಬೋಧಕೇತರ ವರ್ಗ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ದೈಹಿಕ ಶಿಕ್ಷಣ ಉಪನ್ಯಾಸಕರಾದ ಪ್ರಮೋದ್ ಗೌಡ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ.