ರಕ್ತದಾನ ಮಾಡುವ ಮೂಲಕ ಮತ್ತೊಂದು ಜೀವವನ್ನು ಉಳಿಸಿ: ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್

ರಕ್ತದಾನ ಮಾಡುವ ಮೂಲಕ ಮತ್ತೊಂದು ಜೀವವನ್ನು ಉಳಿಸಿ:  ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್

ಸೋಮವಾರಪೇಟೆ:-ರಕ್ತದಾನ ಮಾಡುವ ಮೂಲಕ ಮತ್ತೊಂದು ಜೀವವನ್ನು ಉಳಿಸಿ ಎಂದು ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದರು.

 ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾ ವತಿಯಿಂದ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಹಾಗು ಬೃಹತ್ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು. ರಕ್ತದಾನ ಮಹಾದಾನವಾಗಿದೆ ನೀವು ನೀಡುವ ರಕ್ತ ಒಂದು ಜೀವವನ್ನು ಉಳಿಸಬಲ್ಲದು ಎಂದರು.

ರಕ್ತ ದಾನದ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆ ಇದೆ ಸರಿಯಲ್ಲಾ.ಮೂರು ತಿಂಗಳಿಗೊಮ್ಮೆ ನೀವು ರಕ್ತ ನೀಡುವ ಮೂಲಕ ದೇಹದಲ್ಲಿ ಹೊಸ ರಕ್ತ ಉತ್ಪತಿಗೆ ಅವಕಾಶ ನೀಡಿದಂತಾಗುತ್ತದೆ ಎಂದರು. ಈ ದೇಶದ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಒಳಿತಿಗಾಗಿ,ಅಭಿವೃದ್ಧಿಗಾಗಿ ದಿನದ 16 ಗಂಟೆಗಳ ಕಾಲ ದುಡಿಯುತ್ತಿದ್ದಾರೆ ಅಂತವರ ಶ್ರೇಯಸಿಗಾಗಿ ಅವರ ನೆನಪಿನಲ್ಲಿ ಇಂತಹ ಆರೋಗ್ಯ ಶಿಬಿರ ಆಯೋಜಿಸಲಾಗಿದೆ .

 ಈ ಶಿಬಿರದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ವಿವಿಧ ವೈದ್ಯರು ಆಗಮಿಸಿದ್ದು ಜನತೆ ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದರು. ಕಾರ್ಯಕ್ರಮದಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಜಮೀರ್,ಮಡಿಕೇರಿ ರಕ್ತ ನಿಧಿ ಘಟಕದ ಮುಖ್ಯಸ್ಥ ಡಾ. ಕರುಂಬಯ್ಯ ,ಸೋಮವಾರಪೇಟೆ ಮಂಡಲ ಬಿಜೆಪಿ ಅಧ್ಯಕ್ಷ ಗೌತಮ್, ಎಸ್.ಸಿ.ಮೋರ್ಚಾ ಅಧ್ಯಕ್ಷ ರಾಮಕೃಷ್ಣ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ,ಉಪಾಧ್ಯಕ್ಷ ಮನುಕುಮಾರ್ ರೈ,ರೈತ ಮೋರ್ಚಾ ಕಾರ್ಯದರ್ಶಿ ಶರತ್, ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಕವಿತಾ ವಿರೂಪಾಕ್ಷ, ಕಾರ್ಯದರ್ಶಿ ದರ್ಶನ್ ಜೋಯಪ್ಪ, ಇಂದಿರಾ ಮೋನಪ್ಪ,ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ದೀಪಕ್ ಹಾಗೂ ಮುಂತಾದವರು ಉಪಸ್ತಿತರಿದ್ದರು.