ಹೆಬ್ಬಾಲೆ :ಶಾಲಾ ದಾಖಲಾತಿ ಆಂದೋಲನಕ್ಕೆ ಚಾಲನೆ

Jun 6, 2026 - 23:00
 0  235
ಹೆಬ್ಬಾಲೆ :ಶಾಲಾ ದಾಖಲಾತಿ ಆಂದೋಲನಕ್ಕೆ ಚಾಲನೆ

ಕುಶಾಲನಗರ : ಸರ್ಕಾರಿ ಶಾಲೆಯಲ್ಲಿ ಉಚಿತ ಸೌಲಭ್ಯಗಳೊಂದಿಗೆ ಗುಣಾತ್ಮಕ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದ್ದು, ಪೋಷಕ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರ್ಪಡೆ ಮಾಡಬೇಕು ಎಂದು ಹೆಬ್ಬಾಲೆ ಸರ್ಕಾರಿ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರದೀಪ್ ಕುಮಾರ್ ಹೇಳಿದರು.

ಸಮೀಪದ ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಏರ್ಪಡಿಸಿದ್ದ ಶಾಲಾ ದಾಖಲಾತಿ ಆಂದೋಲನಕ್ಕೆ ಚಾಲನೆ ನೀಡಿ‌ ಅವರು ಮಾತನಾಡಿದರು.

ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ಇದೇ ವೇಳೆ ಕೊಪ್ಪಳ ಜಿಲ್ಲೆಯಿಂದ ಕೂಲಿ ಅರಸಿಕೊಂಡ ಬಂದ ವಲಸಿಗರ 9 ಮಕ್ಕಳನ್ನು 6ನೇ ತರಗತಿಗೆ 4, 5ನೇ ತರಗತಿಗೆ ನಾಲ್ಕು ಹಾಗೂ 7ನೇ ತರಗತಿಗೆ ಒಬ್ಬ ವಿದ್ಯಾರ್ಥಿಯನ್ನು ದಾಖಲಿಸಿಕೊಳ್ಳಲಾಯಿತು.

ಈ ಸಂದರ್ಭ ಶಾಲೆಯ ಮುಖ್ಯ ಶಿಕ್ಷಕ ಹೆಚ್.ಎಮ್. ವೆಂಕಟೇಶ್,ಹಿರಿಯ ಶಿಕ್ಷಕಿ ಬಬಿತ. ದೈಹಿಕ ಶಿಕ್ಷಕಿ ವಂಜಮ್ಮ, ಶಿಕ್ಷಕರಾದ ಕೆ.ಎಸ್.ರಮ್ಯಾ,ಶಿವಾನಂದ,ಎಲ್.ಕೆ.ಜಿ ಶಿಕ್ಷಕಿ ಪ್ರತಿಮ,ರೈತ ಸಂಘದ ಮುಖಂಡ ಎಸ್.ಆರ್.ಮಂಜುನಾಥ್ ಭಾಗವಹಿಸಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0