7 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಶಾಲಾ ಪ್ರಾಂಶುಪಾಲರ ಬಂಧನ | ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು

Sep 28, 2025 - 15:33
 0  706
7 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಶಾಲಾ ಪ್ರಾಂಶುಪಾಲರ ಬಂಧನ | ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು
Photo credit: Free press journal(Representational Image)

ಥಾಣೆ: ಏಳು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಡೊಂಬಿವಿಲಿಯಲ್ಲಿ ಮನ್ಪಾಡಾ ಪೊಲೀಸರು ಸ್ಥಳೀಯ ಶಾಲೆಯ ಪ್ರಾಂಶುಪಾಲರನ್ನು ಬಂಧಿಸಿದ್ದಾರೆ.

 ಆರೋಪಿಯು ಶಾಲೆಯಲ್ಲಿ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದು, ಹೆಚ್ಚುವರಿಯಾಗಿ ಪ್ರಾಂಶುಪಾಲರ ಜವಾಬ್ದಾರಿಯನ್ನೂ ಹೊತ್ತಿದ್ದ ಎನ್ನಲಾಗಿದೆ.

ಆರೋಪಿಯು ಸೆ. 24ರಂದು ಶಾಲಾ ಆವರಣದೊಳಗೆ ಒಂದನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಈ ಕೃತ್ಯದ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ. ಆಕೆಯ ಖಾಸಗಿ ಭಾಗಗಳನ್ನು ಆರೋಪಿ ಅಸಭ್ಯವಾಗಿ ಮುಟ್ಟಿದ್ದಾನೆ ಎಂಬುದು ದೂರಿನಲ್ಲಿ ಉಲ್ಲೇಖವಾಗಿದೆ.

ಘಟನೆಯ ಬಗ್ಗೆ ತಿಳಿದ ತಕ್ಷಣ ಬಾಲಕಿಯ ಪೋಷಕರು ಮನ್ಪಾಡಾ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ದೂರು ದಾಖಲಿಸಿದರು. ಅದರ ಆಧಾರದ ಮೇಲೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಜೊತೆಗೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ವಿಧಿಗಳಡಿ ಪ್ರಕರಣ ದಾಖಲಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಡೊಂಬಿವಿಲಿ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಸುಹಾಸ್ ಹೆಮಾಡೆ ಅವರು, “ಬಾಲಕಿಯ ಪೋಷಕರ ದೂರು ಸ್ವೀಕರಿಸಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ಪ್ರಾಂಶುಪಾಲನನ್ನು ಶನಿವಾರ ಬಂಧಿಸಿದ್ದು, ಭಾನುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ” ಎಂದು ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 1
Angry Angry 0
Sad Sad 1
Wow Wow 0