ಕುಶಾಲನಗರದಲ್ಲಿ ಶನಿವಾರ ಸ್ಕೌಟ್ಸ್, ಗೈಡ್ಸ್ ತರಬೇತಿ ಉದ್ಘಾಟನೆ

Jul 24, 2026 - 17:42
 0  40
ಕುಶಾಲನಗರದಲ್ಲಿ ಶನಿವಾರ ಸ್ಕೌಟ್ಸ್, ಗೈಡ್ಸ್ ತರಬೇತಿ  ಉದ್ಘಾಟನೆ

ಕುಶಾಲನಗರ, ಜುಲೈ ,24: ಭಾರತ್ ಸ್ಕೌಟ್ಸ್, ಗೈಡ್ಸ್ ಕರ್ನಾಟಕದ ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯ ಆಶ್ರಯದಲ್ಲಿ ಶುಕ್ರವಾರದಿಂದ ಕುಶಾಲನಗರದ ಕೊಡವ ಸಮಾಜದಲ್ಲಿ ಶಿಕ್ಷಕರು‌ & ಉಪನ್ಯಾಸಕರಿಗೆ ಒಂದು ವಾರ ಕಾಲ ಸ್ಕೌಟ್ಸ್, ಗೈಡ್ಸ್, ರೋವರ್ಸ್ ಮತ್ತು ರೇಂಜರ್ಸ್ ತರಬೇತಿದಾರರಿಗೆ ಹಮ್ಮಿಕೊಂಡಿರುವ ಜಿಲ್ಲಾಮಟ್ಟದ ಮೂಲ ತರಬೇತಿ ಹಾಗೂ ಮುಂದುವರೆದ ತರಬೇತಿ ಶಿಬಿರವನ್ನು ಶನಿವಾರ ಬೆಳಿಗ್ಗೆ 10.30 ಗಂಟೆಗೆ ಉದ್ಘಾಟಿಸಲಾಗುವುದು.

ಸ್ಕೌಟ್ಸ್, ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿಮಾಥ್ಯೂ ಅವರ ಅಧ್ಯಕ್ಷತೆಯಲ್ಲಿ ಆರಂಭವಾಗಲಿರುವ ಈ ತರಬೇತಿ ಶಿಬಿರವನ್ನು ಭಾರತ್ ಸ್ಕೌಟ್ಸ್, ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ ಅವರು ಉದ್ಘಾಟಿಸಲಿದ್ದಾರೆ. ಶಾಸಕ ಡಾ ಮಂತರ್ ಗೌಡ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಜಿಲ್ಲಾಧಿಕಾರಿ ಎಸ್.ಜಿ.ಸೋಮಶೇಖರ್, ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ‌ ಪ್ರವೀಣ್ ದೇವರಗುಂಡ ಸೋಮಪ್ಪ, ಜಿಲ್ಲಾ ಸ್ಕೌಟ್ಸ್ ವಿಭಾಗದ ಆಯುಕ್ತ ಜಿಮ್ಮಿ ಸಿಕ್ವೇರಾ, ಗೈಡ್ಸ್ ವಿಭಾಗದ ಆಯುಕ್ತೆ ರಾಣಿ ಮಾಚಯ್ಯ ಸೇರಿದಂತೆ ಸಂಸ್ಥೆಯ ಜಿಲ್ಲಾ ಮತ್ತು ಸ್ಥಳೀಯ ಸಂಸ್ಥೆಯ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

 ತರಬೇತಿಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಮತ್ತು ಪಿಯೂ ಕಾಲೇಜಿನ ಉಪನ್ಯಾಸಕರಿಗೆ ಮೂಲ ತರಬೇತಿ ಮತ್ತು ಮುಂದುವರಿದ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಲಾಗಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0