ಬಿಇಓ ಆನಂದ್ ಅವರ ನಿಧನಕ್ಕೆ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯಿಂದ ಸಂತಾಪ
admincoorgdaily

ಮಡಿಕೇರಿ,ಆ.7: ಶುಕ್ರವಾರ ಹೃದಯಾಘಾತದಿಂದ ನಿಧನ ಹೊಂದಿದ ಶಾಲಾ ಶಿಕ್ಷಣ ಇಲಾಖೆಯ ವಿರಾಜಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಜೆ. ಆನಂದ ಅವರ ಆತ್ಮಕ್ಕೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ತೀವ್ರ ಸಂತಾಪ ಸೂಚಿಸಲಾಗಿದೆ.
ಬಿಇಓ ಆನಂದ್ ಅವರು ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವತಿಯಿಂದ ನಡೆಯುತ್ತಿದ್ದ ಕಾರ್ಯಕ್ರಮಗಳಿಗೆ ಸಹಕಾರ ನೀಡುವ ಮೂಲಕ ಸ್ಕೌಟ್ಸ್ ಮತ್ತು ಗೈಡ್ಸ್ ನ ಚಟುವಟಿಕೆಗಳಿಗೆ ಸದಾ ಪ್ರೋತ್ಸಾಹ ನೀಡುತ್ತಿದ್ದರು ಎಂದು ಸ್ಕೌಟ್ಸ್ ಮತ್ತು ಗೈಡ್ಸ್ ನ ಸಂಸ್ಥೆಯ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮಾಥ್ಯೂ ತಮ್ಮ ಶೋಕ ಸಂತಾಪದಲ್ಲಿ ತಿಳಿಸಿದ್ದಾರೆ. ಮೃತರ ನಿಧನಕ್ಕೆ ಜಿಲ್ಲಾ ಹಾಗೂ ಸ್ಥಳೀಯ ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು ತೀವ್ರ ಸಂತಾಪ ಸೂಚಿಸಲಾಗಿದೆ ಎಂದು ತಿಳಿಸಲಾಗಿದೆ.