ಸ್ಕೌಟ್ಸ್, ಗೈಡ್ಸ್ ವತಿಯಿಂದ ಆ.9 ರಂದು ಬ್ಯಾಡಗೊಟ್ಟದಲ್ಲಿಜಿಲ್ಲಾ ಮಟ್ಟದ ವಿಶ್ವ ಬುಡಕಟ್ಟು ದಿನಾಚರಣೆ
ಕುಶಾಲನಗರ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವತಿಯಿಂದ ವಿಶ್ವದ ಬುಡಕಟ್ಟು (ಆದಿವಾಸಿ) ಜನರ ಹಕ್ಕುಗಳ ರಕ್ಷಣೆ ಮತ್ತು ಮಕ್ಕಳ ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸುವ ದಿಸೆಯಲ್ಲಿ ಆಗಸ್ಟ್ 9 ರಂದು ಶನಿವಾರ ಕುಶಾಲನಗರ ತಾಲ್ಲೂಕಿನ ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದ ಗಿರಿಜನರ ಪುನರ್ವಸತಿ ಕೇಂದ್ರದಲ್ಲಿ ವಿಶ್ವ ಬುಡಕಟ್ಟು ಜನರ ದಿನಾಚರಣೆ: 2025 ರ ಜಿಲ್ಲಾಮಟ್ಟದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆ, ಕುಶಾಲನಗರ ಸ್ಥಳೀಯ ಸಂಸ್ಥೆ , ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲ್ಲೂಕು ಗಿರಿಜನ ಸಮಗ್ರ ಅಭಿವೃದ್ಧಿ ಯೋಜನೆ ವತಿಯಿಂದ ಕೂಡಿಗೆ ಗ್ರಾಮ ಪಂಚಾಯತಿ ಹಾಗೂ ಬಸವನಹಳ್ಳಿಯಲ್ಲಿರುವ ತಾಲ್ಲೂಕು ಗಿರಿಜನ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ (ಲ್ಯಾಂಪ್ಸ್ ಸೊಸೈಟಿ) ದ ಸಹಯೋಗದೊಂದಿಗೆ ಅಂದು ಬೆಳಿಗ್ಗೆ 10 ಗಂಟೆಗೆ ಕೂಡಿಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಟಿ.ಗಿರೀಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ವಿಶ್ವ ಬುಡಕಟ್ಟು ದಿನಾಚರಣೆಯನ್ನು ಶಾಸಕ ಡಾ ಮಂತರ್ ಗೌಡ ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ತಿಳಿಸಿದ್ದಾರೆ.
ಬುಡಕಟ್ಟು ಜನಾಂಗದ ಮಕ್ಕಳಲ್ಲಿ ಉತ್ತಮ ಶಿಕ್ಷಣ ಹಾಗೂ ಆರೋಗ್ಯ ರಕ್ಷಣೆಯೊಂದಿಗೆ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದೊಂದಿಗೆ ಬುಡಕಟ್ಟು ಜನಾಂಗದ ಆಚಾರ, ವಿಚಾರ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ದಿಸೆಯಲ್ಲಿ ಬುಡಕಟ್ಟು ದಿನಾಚರಣೆಯನ್ನು ಸಂಘಟಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ , ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಜಿಲ್ಲಾ ಸ್ಕೌಟ್ಸ್ ಸಂಸ್ಥೆಯ ಜಿಮ್ಮಿ ಸಿಕ್ವೇರಾ, ಜಿಲ್ಲಾ ಗೈಡ್ಸ್ ನ ಆಯಕ್ತೆ ರಾಣಿ ಮಾಚಯ್ಯ, ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ ಪ್ರವೀಣ್ ದೇವರಗುಂಡ ಸೋಮಪ್ಪ ಭಾಗವಹಿಸಿದ್ದು, ಆದಿವಾಸಿ ಸಮುದಾಯದ ಐ.ಎ.ಎಸ್. ವಿದ್ಯಾರ್ಥಿ ಜೆ.ಜಿ.ಸುರೇಶ್ ಮುಖ್ಯ ಭಾಷಣ ಮಾಡಲಿದ್ದಾರೆ ಎಂದು ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಎಂ.ಎಸ್.ಗಣೇಶ್ ತಿಳಿಸಿದ್ದಾರೆ. ಲ್ಯಾಂಪ್ಸ್ ಸೊಸೈಟಿಯ ಅಧ್ಯಕ್ಷ ಎಸ್.ಆರ್.ಅರುಣ್ ರಾವ್, ಆದಿವಾಸಿ ರಕ್ಷಣಾ ಪರಿಷತ್ತಿನ ರಾಜ್ಯ ನಿರ್ದೇಶಕ ಬಿ.ಎ..ಗಂಗಾಧರ್, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಸಿದ್ದೇಗೌಡ , ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಜಯಶ್ರೀ, ಗ್ರಾಮ ಪಂಚಾಯ್ತಿ ಸದಸ್ಯ ಟಿ.ಪಿ.ಹಮೀದ್, ಎಸ್.ಎನ್.ಅನಂತ್, ಕೆ.ಎಸ್.ಶಿವಕುಮಾರ್,ಪಿಡಿಓ ಮಂಜುಳಾ, ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಸ್ಥಾನೀಕ ಆಯುಕ್ತ ಎಚ್.ಆರ್.ಮುತ್ತಪ್ಪ, ಜಿಲ್ಲಾ ಸ್ಕೌಟ್ಸ್ ನ ತರಬೇತಿ ಆಯುಕ್ತ ಕೆ.ಯು.ರಂಜಿತ್ , ಜಿಲ್ಲಾ ಸಂಸ್ಥೆಯ ಕಾರ್ಯದರ್ಶಿ ಎಂ.ಎಂ.ವಸಂತಿ ಪಾಲ್ಗೊಳ್ಳಲಿದ್ದಾರೆ ಎಂದು ಕುಶಾಲನಗರ ಸ್ಥಳೀಯ ಸಂಸ್ಥೆಯ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ ಪ್ರವೀಣ್ ದೇವರಗುಂಡ ಸೋಮಪ್ಪ ತಿಳಿಸಿದ್ದಾರೆ.