ದ್ವಿತೀಯ ಪಿಯುಸಿ ಫಲಿತಾಂಶ; ನಾಪೋಕ್ಲುವಿನ ಕೆ.ಪಿ.ಎಸ್ ಶಾಲೆಯ ಶಾಮಿಲಾ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ
ವರದಿ :ಝಕರಿಯ ನಾಪೋಕ್ಲು
ನಾಪೋಕ್ಲು : ರಾಜ್ಯದ್ಯಂತ 2025 -26 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕೆ. ಎಸ್. ಶಾಮಿಲಾ ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಗೊಂಡಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಯ ಕಲಾ ವಿಭಾಗದಲ್ಲಿ 600ಕ್ಕೆ532ಅಂಕದೊಂದಿಗೆ ಶಾಲೆಗೆ ಪ್ರಥಮಸ್ಥಾನ ಪಡೆದು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿದ್ದಾರೆ. ಶಾಮಿಲಾ ನಾಪೋಕ್ಲು ಬೇತು ಗ್ರಾಮದ ಕೆ.ಎ.ಷರೀಫ್ ಪಾಪ್ರಾಟ್ ಹಾಗೂ ಕದೀಜ ದಂಪತಿಗಳ ಪುತ್ರಿ. ವಿದ್ಯಾರ್ಥಿನಿಯ ಸಾಧನೆಗೆ ಕರ್ನಾಟಕ ಪಬ್ಲಿಕ್ ಶಾಲೆಯ ಮೇಲುಸ್ತುವಾರಿ ಸಮಿತಿ, ಶಾಲೆಯ ಪ್ರಾಂಶುಪಾಲರು, ಉಪನ್ಯಾಸಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
1
