ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Apr 9, 2026 - 15:18
 0  640
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು : ಪ್ರಸ್ತುತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಇಂದು (ಎ.9) ಪ್ರಕಟಗೊಂಡಿದೆ. ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು https://karresults.nic.in ಪಡೆಯಬಹುದಾಗಿದೆ. ಆನ್‌ಲೈನ್ ನಲ್ಲಿ ಫಲಿತಾಂಶ ಪ್ರಕಟವಾಗಿದ್ದು, ಬಳಿಕ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಇಂದು ಸಂಜೆ 6ಕ್ಕೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ.

What's Your Reaction?

Like Like 3
Dislike Dislike 0
Love Love 4
Funny Funny 1
Angry Angry 1
Sad Sad 1
Wow Wow 0