ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ರಾಫೆಲ್ಸ್ ಇಂಟರ್ನ್ಯಾಷನಲ್ ಪಿಯು ಕಾಲೇಜಿಗೆ ಶೇಕಡಾ 97.23% ರಷ್ಟು ಫಲಿತಾಂಶ
ಮಡಿಕೇರಿ;ತಾಲ್ಲೂಕಿನ ಹೊದವಾಡದ ರಾಫೆಲ್ಸ್ ಇಂಟರ್ನ್ಯಾಷನಲ್ ಪಿಯು ಕಾಲೇಜಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 97.23% ರಷ್ಟು ಫಲಿತಾಂಶ ಬಂದಿದೆ. ವಿಜ್ಞಾನ ವಿಭಾಗದಲ್ಲಿ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡಾ 100% ರಷ್ಟು ಫಲಿತಾಂಶ ಬಂದಿದ್ದು,ವಾಣಿಜ್ಯ ವಿಭಾಗದಲ್ಲಿ ಶೇಕಡಾ 96.30& ರಷ್ಟು ಫಲಿತಾಂಶ ಪಡೆದಿದೆ. 04 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ. 20 ವಿದ್ಯಾರ್ಥಿಗಳು ಪ್ರಥಮ,10 ವಿದ್ಯಾರ್ಥಿಗಳು ದ್ವಿತೀಯ, ಹಾಗೂ ಒಬ್ಬ ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.