ಆ.10 ರಂದು ಅರೆಭಾಷೆ ಜಂಬರ-ಆಟಿ ಕೂಟ ಕಾರ್ಯಕ್ರಮ

ಆ.10 ರಂದು ಅರೆಭಾಷೆ ಜಂಬರ-ಆಟಿ ಕೂಟ ಕಾರ್ಯಕ್ರಮ

ಮಡಿಕೇರಿ-ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಜಾಲ್ಸೂರು ವಿಜಯ ಗ್ರಾಮಾಭಿವೃದ್ಧಿ ಸಮಿತಿ ಇವರ ಸಹಯೋಗದಲ್ಲಿ ಅರೆಭಾಷೆ ಜಂಬರ-ಆಟಿ ಕೂಟ ಕಾರ್ಯಕ್ರಮವು ಆಗಸ್ಟ್, 10 ರಂದು ಬೆಳಗ್ಗೆ 10 ಗಂಟೆಗೆ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾರ್ತಿಕೇಯ ಸಭಾಭವನದಲ್ಲಿ ನಡೆಯಲಿದೆ.

 ಪ್ರಗತಿಪರ ಕೃಷಿಕರಾದ ಎ.ಆರ್.ಗಂಗಾಧರ ಗೌಡ ಅಡ್ಕಾರು, ಜಾಲ್ಸೂರು ಗ್ರಾ.ಪಂ. ಅಧ್ಯಕ್ಷರಾದ ಸಾವಿತ್ರಿ ಅಡ್ಕಾರು ಇತರರು ಪಾಲ್ಗೊಳ್ಳಲಿದ್ದಾರೆ. ನಂತರ ಬೆಳಗ್ಗೆ 10.30 ಗಂಟೆಗೆ ಶ್ರೀ ಕನಕದಾಸ ಮಕ್ಕಳ ಭಜನಾ ಮಂಡಳಿ ಕನಕಮಜಲು ಇದರ ಸದಸ್ಯರಿಂದ ಕುಣಿತ ಭಜನೆ ನಡೆಯಲಿದೆ. ನಂತರ ಸೋಬಾನೆ(ಹೆಣ್ಣು ಮಕ್ಕಳಿಗೆ), ಅಜ್ಜಿ ಕಥೆ(50 ವರ್ಷ ಮೇಲ್ಪಟ್ಟ ಎಲ್ಲವೂ ಭಾಗವಹಿಸಬಹುದು), ನೇಜಿ ಹಾಡ್(ಎಲ್ಲವೂ ಭಾಗವಹಿಸಬಹುದು), ಕಾಯಿಗೆ ಕಲ್ಲು ಹೊಡೆಯುವುದು(ಪುರುಷರಿಗೆ) ಮತ್ತು ಪುಟಾಣಿ ಮಕ್ಕಳಿಗೆ ಲಕ್ಕಿ ಗೇಮ್ (5 ರಿಂದ 10 ವರ್ಷದ ಮಕ್ಕಳಿಗೆ) ಸ್ಪರ್ಧಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 2 ಗಂಟೆಯಿಂದ ಸ್ಥಳೀಯರಿಂದ ಸಾಂಸ್ಕೃತಿಕ ಕಾರ್ಯಕ್ರಮ, ನಂತರ ಮಧ್ಯಾಹ್ನ 2.30 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.

 ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಹರೀಶ್ ಇಂಜಾಡಿ, ಸುಳ್ಯ ಎಂಜಿಎ ವಿದ್ಯಾಸಂಸ್ಥೆಯ ಸಂಚಾಲಕರಾದ ದೊಡ್ಡಣ್ಣ ಬರೆಮೇಲು, ಜಾಲ್ಸೂರು ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸುಧಾಕರ್ ಕಾಮತ್, ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಹರಿಪ್ರಕಾಶ್ ಅಡ್ಕಾರು, ಸುಳ್ಯ ಗೌಡರ ಯುವ ಸೇವಾ ಸಂಘದ ಅಧ್ಯಕ್ಷರಾದ ಪಿ.ಎಸ್.ಗಂಗಾಧರ, ಸುಳ್ಯ ಎಪಿಎಂಸಿ ಮಾಜಿ ಅಧ್ಯಕ್ಷರು ನಿವೃತ್ತ ಯೋಧರು ಅಡ್ಡಂತಡ್ಕ ದೇರಣ್ಣ ಗೌಡ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯರಾದ ತಿರುಮಲೇಶ್ವರಿ ಅರ್ಭಡ್ಕ, ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಮೊಕ್ತೇಸರರಾದ ಗುರುರಾಜ್ ಭಟ್, ಜಾಲ್ಸೂರು ವಿಜಯ ಗ್ರಾಮಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಯಶ್ವಿತ್ ಕಾಳಮ್ಮನೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸದಸ್ಯರು ಇತರರು ಪಾಲ್ಗೊಳ್ಳಲಿದ್ದಾರೆ.