ಕಾಂಗ್ರೆಸ್ ‌ಹಿರಿಯ ಮುಖಂಡ ಗಣೇಶ್ ಪೆಮ್ಮಯ್ಯ ನಿಧನ: ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಾಸಕ‌ ಎಎಸ್ ಪೊನ್ನಣ್ಣ

ಕಾಂಗ್ರೆಸ್ ‌ಹಿರಿಯ ಮುಖಂಡ ಗಣೇಶ್ ಪೆಮ್ಮಯ್ಯ ನಿಧನ: ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಾಸಕ‌ ಎಎಸ್ ಪೊನ್ನಣ್ಣ

ಮಡಿಕೇರಿ:ಇತ್ತೀಚೆಗೆ ನಿಧನರಾದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಮಡಿಕೇರಿ ತಾಲೂಕಿನ ಕಕ್ಕಬೆ ನಾಲಾಡಿ ಗ್ರಾಮದ ನಿವಾಸಿ ಗಣೇಶ್ ಪೆಮ್ಮಯ್ಯರವರ ಮನೆಗೆ ಭೇಟಿ ನೀಡಿದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು‌ಮನೆಯವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಕೆಡಿಪಿ ಸದಸ್ಯರು ಬಾಚಮಾಂಡ ಲವ ಚಿಣ್ಣಪ್ಪ, ಪಂಚಾಯಿತಿ ಸದಸ್ಯರು ಕಲಿಯಂಡ ಸಂಪನ್ ಅಯ್ಯಪ್ಪ, ಕುಂಡಚ್ಚಿರ ಮಂಜು ದೇವಯ್ಯ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.