ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ನಿಧನ: ಶಾಸಕ ಎ.ಎಸ್ ಪೊನ್ನಣ್ಣ ಸಂತಾಪ
ಬೆಂಗಳೂರು:ಕನ್ನಡ ಸಾಹಿತ್ಯ ಲೋಕದ ದಿಗ್ಗಜ ಬರಹಗಾರ ಎಸ್.ಎಲ್ ಭೈರಪ್ಪ ರವರ ನಿಧಾನ ವಾರ್ತೆ ಅತೀವ ದುಃಖ ತಂದಿದೆ ಎಂದು ಶಾಸಕ ಎ.ಎಸ್ ಪೊನ್ನಣ್ಣ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಶ್ರೇಷ್ಠ ಬರಹಗಾರರಾಗಿದ್ದ ಶ್ರೀ ಎಸ.ಎಲ್ ಭೈರಪ್ಪನವರು ತಮ್ಮ ಬರಹದ ಮೂಲಕ ಸಮಾಜಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡಿದ್ದರು. ಭಗವಂತನು ಅವರ ದಿವ್ಯತ್ಮಕ್ಕೆ ಚಿರಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತಾ, ಅವರ ಅಗಲಿಕೆಯ ದುಃಖದ ನೋವನ್ನು ಭರಿಸುವ ಶಕ್ತಿ ಅವರ ಅಪಾರ ಅಭಿಮಾನಿ ಬಳಗಕ್ಕೆ ಹಾಗೂ ಬಂಧು ವರ್ಗಕ್ಕೆ ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆಎಎಸ್ ಪೊನ್ನಣ್ಣ ಅವರು ಸಂತಾಪ ಸೂಚಿಸಿದ್ದಾರೆ.