ಸೆಪ್ಟೆಂಬರ್ 09 ಮಿಸ್ಟಿ ಹಿಲ್ಸ್ ನಿಂದ ಐವರು ಶಿಕ್ಷಕರಿಗೆ ನೇಷನ್ ಬಿಲ್ಡರ್ ಪ್ರಶಸ್ತಿ ಪ್ರದಾನ

ಮಡಿಕೇರಿ - ರೋಟರಿ ಮಡಿಕೇರಿ ಮಿಸ್ಟಿ ಹಿಲ್ಸ್ ವತಿಯಿಂದ ಸೆ.9 ರಂದು ಮಂಗಳವಾರ ಐವರು ಶಿಕ್ಷಕರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ. ನಗರದ ರೋಟರಿ ಸಭಾಂಗಣದಲ್ಲಿ ಸೆ.9 ರಂದು ಮಂಗಳವಾರ ಸಂಜೆ 7 ಗಂಟೆಗೆ ಆಯೋಜಿತ ಸಮಾರಂಭದಲ್ಲಿ ಮೂನಾ೯ಡು ಪ.ಪೂ.ಕಾಲೇಜಿನ ಪ್ರಾಂಶುಪಾಲೆ ಪಳಂಗಂಡ ದೇವಕಿ, ಮದೆನಾಡು ಪ.ಪೂ.ಕಾಲೇಜಿನ ನಿವೖತ್ತ ಉಪನ್ಯಾಸಕ ಬಾರಿಯಂಡ ಜೋಯಪ್ಪ, ಮಡಿಕೇರಿ ಜನರಲ್ ತಿಮ್ಮಯ್ಯ ಶಾಲಾ ಪ್ರಾಂಶುಪಾಲೆ ಬಾಳೆಯಡ ಸವಿತಾ ಕಿಶನ್, ಕೊಡಗು ವಿದ್ಯಾಲಯದ ಶಿಕ್ಷಕಿ ಅಲೆಮಾಡ ಚಿತ್ರಾನಂಜಪ್ಪ, ಮತ್ತು ಸುಂಟಿಕೊಪ್ಪ ಸ್ವಸ್ಥ ವಿಶೇಷ ಚೇತನ ಶಾಲೆಯ ಹಿರಿಯ ಶಿಕ್ಷಕಿ ಕೆ. ಲಲಿತಾ ಅವರನ್ನು ರೋಟರಿ ಸಂಸ್ಥೆಯ ವತಿಯಿಂದ ನೀಡಲಾಗುವ ಪ್ರತಿಷ್ಟಿತ ವಾಷಿ೯ಕ ಪ್ರಶಸ್ತಿ ನೇಷನ್ ಬಿಲ್ಡರ್ ಅವಾಡ್೯ ಪ್ರಧಾನ ಮಾಡಿ ಸನ್ಮಾನಿಸಲಾಗುತ್ತದೆ ಅತ್ಯುತ್ತಮ ಶಿಕ್ಷಕ ಎಂಬ ರಾಷ್ಟ್ರಪ್ರಶಸ್ತಿ ಪಡೆದಿರುವ ಅರಂತೋಡು ಗ್ರಾಮದ ಕೆ.ಆರ್. ಗಂಗಾಧರ್ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ , ರೋಟರಿ ವಲಯ 6 ರ ಸಹಾಯಕ ಗವನ೯ರ್ ಧಿಲನ್ ಚಂಗಪ್ಪ, ವಲಯ ಸೇನಾನಿ ಕೆ.ಸಿ. ಕಾಯ೯ಪ್ಪ ಕಾಯ೯ಕ್ರಮದಲ್ಲಿ ಹಾಜರಿರುತ್ತಾರೆ ಎಂದು ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.