ಸೆ.23(ಮಂಗಳವಾರ) ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಕೊಡಗು ಜಿಲ್ಲಾ ಪ್ರವಾಸ

ಮಡಿಕೇರಿ:-ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ಸೆಪ್ಟೆಂಬರ್, 23 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಸಚಿವರು ಸೆಪ್ಟೆಂಬರ್, 23 ರಂದು 8.30 ಗಂಟೆಗೆ ಪೊನ್ನಂಪೇಟೆಯಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ ಸಿಎಚ್‍ಸಿ ಸ್ಥಳ ವೀಕ್ಷಣೆ ಮಾಡಲಿದ್ದಾರೆ. ನಂತರ ಬೆಳಗ್ಗೆ 9.30 ಗಂಟೆಗೆ ವಿರಾಜಪೇಟೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಬಳಿಕ ಬೆಳಗ್ಗೆ 11 ಗಂಟೆಗೆ ಕುಶಾಲನಗರದ ಸೈರಸ್ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಬೆಳಗ್ಗೆ 11.45 ಗಂಟೆಗೆ ಕುಶಾಲನಗರದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ತಾಲ್ಲೂಕು ಆಸ್ಪತ್ರೆಯ ಸ್ಥಳ ವೀಕ್ಷಣೆ ಮಾಡಲಿದ್ದಾರೆ. ಬಳಿಕ ಮಧ್ಯಾಹ್ನ 1 ಗಂಟೆಗೆ ಆಲೂರು ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಕೆ.ಎ.ಹಿದಾಯತ್ತುಲ್ಲ ಅವರು ತಿಳಿಸಿದ್ದಾರೆ.