ಖಾಸಗಿ ಬಸ್ ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ: ಶಾಲಾ ಬಸ್, ಸರ್ಕಾರಿ ಬಸ್ ಜಖಂ

Aug 4, 2026 - 12:45
 0  1.4k
ಖಾಸಗಿ ಬಸ್ ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ: ಶಾಲಾ ಬಸ್, ಸರ್ಕಾರಿ ಬಸ್ ಜಖಂ

ಮಾದಾಪುರ: ಖಾಸಗಿ ಬಸ್ ಚಾಲಕನ ಅಜಾಗರೂಕತೆಯಿಂದ ಮಾದಾಪುರ ಪಟ್ಟಣದಲ್ಲಿ ಇಂದು ಬೆಳಗ್ಗೆ ಸರಣಿ ಅಪಘಾತ ಸಂಭವಿಸಿದೆ. ಒಂದು ಖಾಸಗಿ ಬಸ್ ನಿಯಂತ್ರಣ ತಪ್ಪಿ ಶಾಲಾ ಬಸ್ ಮತ್ತು ಸರ್ಕಾರಿ ಬಸ್ ಗಳಿಗೆ ಡಿಕ್ಕಿ ಹೊಡೆದಿದೆ.

ಘಟನೆ ನಡೆದಾಗ ಶಾಲಾ ಸಮಯವಾಗಿದ್ದರಿಂದ ರಸ್ತೆಯಲ್ಲಿ ವಿದ್ಯಾರ್ಥಿಗಳು ಹಾಗೂ ವಾಹನಗಳ ದಟ್ಟಣೆ ಇತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಶಾಲಾ ಬಸ್ ಮತ್ತು ಸರ್ಕಾರಿ ಬಸ್ ಗಳಿಗೆ ಹಾನಿಯಾಗಿದೆ. ಅಪಘಾತದ ನಂತರ ಮಾದಾಪುರ ಪಟ್ಟಣದ ಮುಖ್ಯ ರಸ್ತೆಯಲ್ಲಿ ಕೆಲ ಸಮಯ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಪೊಲೀಸರು ಸ್ಥಳಕ್ಕೆ ಆಗಮಿಸಿ ವಾಹನಗಳನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 2
Wow Wow 0