ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಗಂಡು ಮಗುವಿಗೆ ಜನ್ಮ ನೀಡಿದ ಬಾಲಕಿ ಶಾಲಾ ವಾಹನ ಚಾಲಕ ಬಂಧನ

Dec 24, 2025 - 17:57
Dec 25, 2025 - 10:18
 0  2.4k
ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಗಂಡು ಮಗುವಿಗೆ ಜನ್ಮ ನೀಡಿದ ಬಾಲಕಿ  ಶಾಲಾ ವಾಹನ ಚಾಲಕ ಬಂಧನ

ಹಾಸನ, ಡಿ.23: ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ ಪರಿಣಾಮ ಆಕೆ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಹಾಸನ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಶಾಲಾ ವಾಹನ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಹಾಸನ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯ ಮೇಲೆ, ಅದೇ ಶಾಲೆಯ ವಾಹನ ಚಾಲಕ ರಂಜಿತ್ ಕಳೆದ ಎಂಟು ತಿಂಗಳಿನಿಂದ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ. ಆರೋಪಿ ಚಾಕೊಲೇಟ್ ನೀಡುವ ನೆಪದಲ್ಲಿ ಬಾಲಕಿಯನ್ನು ಮೇಲೆ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ.

ಬಾಲಕಿ ಹಾಸನದ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಅಗತ್ಯ ಆರೈಕೆಯ ನಂತರ ಬಾಲಕಿ ಹಾಗೂ ಮಗುವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಾಂತ್ವನ ಕೇಂದ್ರಕ್ಕೆ ಒಪ್ಪಿಸಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಅನಿಲ್ ಮಾಹಿತಿ ನೀಡಿದ್ದಾರೆ.

ಈ ಪ್ರಕರಣದಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POSCO) ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

What's Your Reaction?

Like Like 0
Dislike Dislike 0
Love Love 1
Funny Funny 1
Angry Angry 3
Sad Sad 4
Wow Wow 0