ಶನಿವಾರಸಂತೆ: ಧರ್ಮಸ್ಥಳ ಸಂಸ್ಥೆ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

ಶನಿವಾರಸಂತೆ: ಧರ್ಮಸ್ಥಳ ಸಂಸ್ಥೆ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

ಶನಿವಾರಸಂತ:-ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸೋಮವಾರಪೇಟೆ ತಾಲೂಕು ಶನಿವಾರಸಂತೆ ವಲಯದ ಸುಳುಗಳಲೆ ಬಿ.ಒಕ್ಕೂಟ ವತಿಯಿಂದ ತ್ಯಾಗರಾಜ ಕಾಲೋನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಟದ ಮೈದಾನದಲ್ಲಿ ಶದ್ದಾ ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಸೋಮವಾರಪೇಟೆ ತಾಲೂಕು ಯೋಜನಾಧಿಕಾರಿ ಹನುಮಂತ ಅಂಗಡಿ ಸ್ವಚ್ಚತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿಗಳ ಗ್ರಾಮಾಭಿವೃದ್ದಿ ಯೋಜನೆಯ ಮೂಲಕ ಗ್ರಾಮೀಣ ಭಾಗದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಗ್ರಾಮೀಣ ಭಾಗದ ಅಭಿವೃದ್ದಿಗಾಗಿ ಶ್ರಮಿಸುತ್ತಿದೆ ಎಂದು ಹೇಳಿದ ಅವರು ಗ್ರಾಮಾಭಿವೃದ್ದಿ ಯೋಜನೆ ಮೂಲಕ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ಕ್ಷೇತ್ರ ಸ್ವಚ್ಚತಾ ಕಾರ್ಯಕ್ರಮವನ್ನು ವರ್ಷದಲ್ಲಿ ಎರಡು ಬಾರಿ ಹಮ್ಮಿಕೊಳ್ಳಲಾಗುತ್ತಿದ್ದು ಈ ನಿಟ್ಟಿನಲ್ಲಿ ದೇವಸ್ಥಾನ, ಬಸದಿ, ಮಸೀದಿ, ಚರ್ಚ್ ಮುಂತಾದ ಧಾರ್ಮಿಕ ಕೇಂದ್ರ ಸೇರಿದಂತೆ ಇತರೆ ಕ್ಷೇತ್ರಗಳಲ್ಲಿ ಸ್ವಚ್ಚತಾ ಶ್ರಮದಾನ ಕಾರ್ಯವನ್ನು ಮಾಡಲಾಗುತ್ತಿದ್ದು ಈ ಮೂಲಕ, ಸರಕಾರಿ ಶಾಲೆಯ ಆಟದ ಮೈದಾನದಲ್ಲಿ ಸ್ವಚ್ಚತಾ ಕಾರ್ಯವನ್ನು ಹಮ್ಮಿಕೊಂಡಿರುವುದು ಉತ್ತಮ ಕಾರ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷೆ ಎಸ್.ಪಿ.ಭಾಗ್ಯ, ವಲಯ ಮೇಲ್ವಿಚಾರಕಿ ಜಯಶ್ರೀ, ಒಕ್ಕೂಟದ ಕಾರ್ಯದರ್ಶಿ ಎಸ್.ಪಿ.ದಿವ್ಯ, ಸೇವಾ ಪ್ರತಿನಿಧಿ ಎಸ್.ಆರ್.ಶೋಭಾವತಿ, ಶಾಲಾ ಮುಖ್ಯ ಶಿಕ್ಷಕ ಪುಟ್ಟಸ್ವಾಮಿ, ಒಕ್ಕೂಟದ ಸದಸ್ಯರಾದ ಸುಮತಿ, ಸಂದ್ಯಾ, ಭವ್ಯ, ಮೋಹನ್, ಶರತ್, ದಿವ್ಯ, ಫಾತೀಮಾ, ಕವಿತಾ, ಭಾಗ್ಯ, ವೇದಾವತಿ, ಶೈಲಾ, ಚಂದ್ರಮತಿ, ರಾಜು, ಇಸ್ಲಾಮ್, ಅಕ್ಷಯ್ ಮುಂತಾದವರು ಸ್ವಚ್ಚತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.