Kodagu

ಶನಿವಾರಸಂತೆ: ಆಲೂರು ಸಿದ್ದಾಪುರದಲ್ಲಿ ನಡೆದ ಉಚಿತ ಕಣ್ಣಿನ ತಪಾಸಣಾ ಶಿಬಿರ

admincoorgdaily

ಶನಿವಾರಸಂತೆ:-ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮಡಿಕೇರಿ, ಅಮ್ಮ ಚಾರಿಟಬಲ್ ಟ್ರಸ್ಟ್ ಹಾಗೂ ಆಲೂರು ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಹಾಸನದ ಅಮ್ಮ ಕಣ್ಣಿನ ಆಸ್ಪತ್ರೆ ಮತ್ತು ರೆಟಿನಾಕೇರ್ ಸೆಂಟರ್ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ಆಲೂರು ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಆಲೂರುಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಸುಪರ್ಣ ಕೃಷ್ಣಾನಂದ್ ಪ್ರತಿಯೊಬ್ಬರೂ ಕಣ್ಣಿನ ಆರೋಗ್ಯದ ಕಡೆಗೆ ನಿಗಾವಹಿಸಬೇಕು ಸಾಮಾನ್ಯವಾಗಿ ನಡು ವಯಸ್ಕರಿಂದ ವೃದ್ಧ ವಯಸ್ಕರಿಗೆ ಬಿಪಿ, ಶುಗರ್ ಸಮಸ್ಯೆಗಳಿರುವುದ್ದರಿಂದ ಇದು ಕಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬೀರುವುದ್ದರಿಂದ ಕಣ್ಣಿನ ಪೊರೆ ಮತ್ತು ಅಂಧತ್ವ ಸಮಸ್ಯೆ ಉಂಟಾಗಬಹುದು ಈ ನಿಟ್ಟಿನಲ್ಲಿ ಕಣ್ಣಿನ ಪರೀಕ್ಷೆ ಮಾಡಿಸಿಕೊಳ್ಳುವುದ್ದರಿಂದ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಹೇಳಿದರು.

ಆರೋಗ್ಯ ಇಲಾಖೆ ಅಂಧತ್ವ ಸಮಸ್ಯೆ ನಿವಾರಣೆಗೋಷ್ಕರವಾಗಿ ಉಚಿತ ಕಣ್ಣಿನ ತಪಾ¸ಣಾ ಶಿಬಿರವನ್ನು ಹಮ್ಮಿಕೊಂಡು ಕಣ್ಣಿನ ಪೊರೆ ಸಮಸ್ಯೆ ಇರುವ ಫಲಾನುಭವಿಗಳನ್ನು ಗುರುತಿಸಿ ಅವರನ್ನು ಹತ್ತಿರದಲ್ಲಿರುವ ಕಣ್ಣಿನ ಆಸ್ಪತ್ರೆಗೆ ಕೊಂಡೊಯ್ದು ಫಲಾನುಭವಿಗೆ ಉಚಿತ ಕಣ್ಣಿನ ಪೊರೆ ಶಸ್ತçಚಿಕಿತ್ಸೆ ವ್ಯವಸ್ಥೆ ಮಾಡಿಕೊಡಲಾಗುತ್ತದೆ ಇದೆರೀತಿಯಲ್ಲಿ ಈ ದಿನ ಉಚಿತ ಕಣ್ಣಿನ ತಪಾಸಣಾ ಶಿಬಿರದಲ್ಲಿ ಕಣ್ಣಿನ ಪೊರೆ ಸಮಸ್ಯೆ ಇರುವ ಪಲಾನುಭವಿಗಳನ್ನು ಗುರುತಿಸಿ ಹಾಸನದ ಅಮ್ಮ ಕಣ್ಣಿನ ಆಸ್ಪತ್ರೆಗೆ ಕೊಂಡೊಯ್ದು ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಮಾಡಿಸಲಾಗುತ್ತದೆ ಈ ನಿಟ್ಟಿನಲ್ಲಿ ಕಣ್ಣಿನ ಸಮಸ್ಯೆ ಇರುವರು ಶಿಬಿರದ ಲಾಭವನ್ನು ಸದುಪಯೋಗಿಸಿಕೊಳ್ಳುವಂತೆ ಮನವಿ ಮಾಡಿದರು. ವೇದಿಕೆಯಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಪ್ರವೀಣ್ ಕುಮಾರ್, ಹಾಸನದ ಅಮ್ಮ ಕಣ್ಣಿನ ಆಸ್ಪತ್ರೆಯ ನೇತ್ರಾ ಪರೀಕ್ಷರಾದ ಪೂಜಾ, ವಿದ್ಯಾ, ಅಭಿಷೇಕ್ ಹಾಜರಿದ್ದರು.