ಶನಿವಾರಸಂತೆ :ರಾಷ್ಟ್ರಮಟ್ಟಕ್ಕೆ ಆಯ್ಕೆ

ಶನಿವಾರಸಂತೆ :ರಾಷ್ಟ್ರಮಟ್ಟಕ್ಕೆ ಆಯ್ಕೆ

ಶನಿವಾರಸಂತೆ:ಕಾವೇರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾದ ಅನೀಶ್ ಡಿ. ಆರ್ ವಿದ್ಯಾರ್ಥಿ ದಿನಾಂಕ 24/12/2025ರಿಂದ 26/12/2025ವರೆಗೆ ಗುಜರಾತ್ ನಲ್ಲಿ ನಡೆಯುವ ರಾಷ್ಟ್ರಮಟ್ಟದ ಖೇಲೋ ಇಂಡಿಯಾ ವತಿಯಿಂದ ನಡೆಯುವ ಸ್ಪರ್ಧೆಯಲ್ಲಿ 110 ಮೀಟರ್ ಹರ್ಡಲ್ಸ್ ನಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ. ಗುಲ್ಬರ್ಗದಲ್ಲಿ ನಡೆದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಸ್ಥಾನ ಪಡೆದಿದ್ದಾರೆ. ಈ ಹಿಂದೆ 2023 ರಲ್ಲಿ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಪದಕ ವಿಜೇತರಾಗಿದ್ದರು. ಈ ವಿದ್ಯಾರ್ಥಿಯ ಸೋಮವಾರಪೇಟೆ ತಾಲೂಕಿನ ದೊಡ್ಡಮಳ್ತೆ ಗ್ರಾಮದ ರಾಜೇಶ್ ಬಿ ಡಿ ಹಾಗೂ ವಿಮಲಾ ಬಿ. ಕೆ ಇವರ ಪುತ್ರನಾಗಿದ್ದಾನೆ.