ಶನಿವಾರಸಂತೆ: ಸಿಡಿಗಳಲೆ ಮಠಕ್ಕೆ ಸಿದ್ದಲಿಂಗ ಸ್ವಾಮೀಜಿ ಭೇಟಿ, ಆಶೀರ್ವಾದ ಪಡೆದ ಶಾಸಕ ಡಾ. ಮಂತರ್ ಗೌಡ
ಶನಿವಾರಸಂತೆ: ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ಶನಿವಾರಸಂತೆಯ ಸಿಡಿಗಳಲೆ ಮಠಕ್ಕೆ ಶನಿವಾರ ಭೇಟಿ ನೀಡಿದರು. ಈ ಸಂದರ್ಭ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಉಭಯ ಮಠಗಳ ಭಕ್ತರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

