ನ.26 ರಂದು‌ ಮುತ್ತಪ್ಪ ದೇವಾಲಯದ ಆವರಣದಲ್ಲಿನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಷಷ್ಠಿ ಮಹೋತ್ಸವ

Nov 24, 2025 - 14:46
Nov 24, 2025 - 15:58
 0  258
ನ.26 ರಂದು‌ ಮುತ್ತಪ್ಪ ದೇವಾಲಯದ ಆವರಣದಲ್ಲಿನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಷಷ್ಠಿ ಮಹೋತ್ಸವ

ಮಡಿಕೇರಿ: ಮುತ್ತಪ್ಪ ದೇವಾಲಯದ ಆವರಣದಲ್ಲಿನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ನ.26ರಂದು ಷಷ್ಠಿ ಮಹೋತ್ಸವ ಶ್ರೀ ಮುತ್ತಪ್ಪ ದೇವಾಲಯ ಉತ್ಸವ ಸಮಿತಿಯಿಂದ ಹಮ್ಮಿಕೊಳ್ಳಲಾಗಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಹಕರಿಸುವಂತೆ ಮುತ್ತಪ್ಪ ದೇವಾಲಯ ಸಮಿತಿ ಅಧ್ಯಕ್ಷ ಟಿ.ಕೆ.ಸುಧೀರ್ ಮನವಿ ಮಾಡಿದ್ದಾರೆ.

 ಷಷ್ಠಿ ಮಹೋತ್ಸವ ಅಂಗವಾಗಿ ಪಂಚಕಜ್ಜಾಯ ಸೇವೆ, ಹಣ್ಣು ಕಾಯಿ ಪೂಜೆ, ಪುಷ್ಪಾರ್ಚನೆ, ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಅಪ್ಪಂಸೇವೆ, ಮಂಗಳಾರತಿ, ಮಹಾಪೂಜೆ ಸೇವೆಗಳು ನಡೆಯಲಿದೆ. ಅಂದು ಬೆಳಗ್ಗೆ ೯ ಗಂಟೆಯಿಂದ ಮುತ್ತಪ್ಪ ದೇವರ ವೆಳ್ಳಾಟಂ, ಕುಟ್ಟಿಚಾತನ್ ದೇವರ ವೆಳ್ಳಾಟಂ, ಪೋದಿ ದೇವರ ವೆಳ್ಳಾಟಂ, ಗುಳಿಗ ದೇವರ ವೆಳ್ಳಾಟಂ ನಡೆಯಲಿದೆ. ಅಂದು ಸಂಜೆ ೬ ಗಂಟೆಗೆ ಭಜನಾ ಕಾರ್ಯಕ್ರಮ ನಡೆಯಲಿದೆ. ನಗರದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಷಷ್ಠಿ ಮಹೋತ್ಸವದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಸುಬ್ರಮಣ್ಯ ಷಷ್ಠಿ ಉತ್ಸವ ಅಧ್ಯಕ್ಷ ಮನುಮಂಜುನಾಥ್, ಮುತ್ತಪ್ಪ ದೇವಾಲಯ ಉತ್ಸವ ಸಮಿತಿ ಅಧ್ಯಕ್ಷ ರವೀಂದ್ರ ರೈ, ಪ್ರಮುಖರಾದ ಗಿರೀಶ್, ವಾಸುದೇವ್ ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0