Kodagu

ಮಗ್ಗುಲ ಗ್ರಾಮದಲ್ಲಿ ಶ್ರೀ ಶನೀಶ್ವರ ಮತ್ತು ನವಗ್ರಹ ದೇವಾಲಯದಲ್ಲಿ ಶ್ರಾವಣ ಮಾಸದ ಶ್ರಾವಣ ಶನಿವಾರ ಪೂಜೆ

admincoorgdaily

ಮಗ್ಗುಲ ಗ್ರಾಮದಲ್ಲಿ ಶ್ರೀ ಶನೀಶ್ವರ ಮತ್ತು ನವಗ್ರಹ ದೇವಾಲಯದಲ್ಲಿ ಶ್ರಾವಣ ಮಾಸದ ಶ್ರಾವಣ ಶನಿವಾರ ಪೂಜೆ

ವಿರಾಜಪೇಟೆ: ವಿರಾಜಪೇಟೆ ಬಳಿಯ ಮಗ್ಗುಲ ಗ್ರಾಮದಲ್ಲಿರುವ ಶ್ರೀ ಶನೀಶ್ವರ ಮತ್ತು ನವಗ್ರಹ ದೇವಾಲಯದಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಶ್ರಾವಣ ಮಾಸದ ಶ್ರಾವಣ ಶನಿವಾರ ಪೂಜೆ ಶ್ರದ್ದಾಭಕ್ತಿಯಿಂದ ನಡೆಯಿತು.

ಶ್ರೀ ಶನೀಶ್ವರ ದೇವಾಲಯದಲ್ಲಿ ಕೊನೆಯ ಶ್ರಾವಣ ಶನಿವಾರದ ಬೆಳಿಗ್ಗೆ 7 ಗಂಟೆಗೆ ಗಣಪತಿ ಹೋಮದೊಂದಿಗೆ ಪೂಜಾ ಕಾರ್ಯಗಳು ಪ್ರಾರಂಭಗೊಂಡವು. ನವಗ್ರಹ ಪೂಜೆ, ಶನಿಶಾಂತಿ ಪೂಜೆ, ಶನಿಜಪ ಸೇರಿದಂತೆ ವಿಶೇಷ ಪೂಜೆಗಳು ನಡೆದು ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ಬಳಿಕ ಪ್ರಸಾಧ ವಿನಿಯೋಗ ನಂತರ ಅನ್ನ ಸಂತರ್ಪಣೆ ನಡೆಯಿತು.

 ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ದೇವಾಲಯಕ್ಕೆ ಆಗಮಿಸಿ ಶ್ರೀ ಶನೀಶ್ವರನ ಕೃಪೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಚೋಕಂಡ ರಮೇಶ್ ಸೇರಿದಂತೆ ಆಡಳಿತ ಮಂಡಳಿಯವರು ಉಪಸ್ಥಿತರಿದ್ದು ಪೂಜಾ ಕೈಂಕರ್ಯ ನಡೆಸಿಕೊಟ್ಟರು.