ಅ.7 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ

ಅ.7 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ
Photo credit: The Indian express

ಮಡಿಕೇರಿ:-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್, 07 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭ ನಡೆಯಲಿದೆ.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಚಿಕ್ಕಳುವಾರ ಕೊಡಗು ವಿಶ್ವವಿದ್ಯಾಲಯದ ಕನ್ನಡ ಉಪನ್ಯಾಸಕರಾದ ಡಾ.ಜಮೀರ್ ಅಹಮದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ ಇತರರು ಪಾಲ್ಗೊಳ್ಳಲಿದ್ದಾರೆ.