ಸಿದ್ದಾಪುರ:ಇಬ್ಬರು ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಸಿದ್ದಾಪುರ: ಇಲ್ಲಿನ ಸಮೀಪದ ಶಿಲ್ಪಿ ಕಾಫಿ ತೋಟದಲ್ಲಿ ಬೆಳ್ಳಂಬೆಳಗ್ಗೆ ಕಾರ್ಮಿಕರ ಮೇಲೆ ಕಾಡಾನೆ ದಾಳಿ ಮಾಡಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ.ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರು ಮೇಲೆ ಕಾಡಾನೆ ದಾಳಿ ನಡೆಸಿದ್ದು ಗಂಭೀರ ಗಾಯಗೊಂಡ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಾಗಿಸಿದ್ದು, ಗಾಯಗೊಂಡ ರಘು (42), ಪ್ರವೀಣ್(30) ಕಾಡಾನೆ ದಾಳಿಯಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಶಿವರಾಂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.