ಸಿದ್ದಾಪುರ:ಅಪ್ರಾಪ್ತ ಬಾಲಕನಿಗೆ ವಾಹನ ನೀಡಿದ ಪ್ರಕರಣ: ಪೋಷಕರಿಗೆ 25,000 ರೂ. ದಂಡ
admincoorgdaily

ಸಿದ್ದಾಪುರ;ಅಪ್ರಾಪ್ತ ವಯಸ್ಸಿನ ಬಾಲಕನಿಗೆ ದ್ವಿಚಕ್ರ ವಾಹನ ಚಾಲನೆ ಮಾಡಲು ಅವಕಾಶ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಈ ಪ್ರಕರಣವನ್ನು ವಿಚಾರಣೆ ನಡೆಸಿದ ಮಡಿಕೇರಿ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯವು, ಪ್ರಕರಣಕ್ಕೆ ಸಂಬಂಧಿಸಿದಂತೆ 25,000 ರೂ. ದಂಡ ವಿಧಿಸಿ ಆದೇಶಿಸಿದೆ. ದಂಡದ ರಶೀದಿಯನ್ನು ಕೊಡಗು ಜಿಲ್ಲಾ ಪೊಲೀಸರು ಬಿಡುಗಡೆ ಮಾಡಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರು*, "ಅಪ್ರಾಪ್ತರಿಗೆ ವಾಹನ ನೀಡಬೇಡಿ. ಅವರ ಭವಿಷ್ಯ ಅಪಾಯಕ್ಕೆ ಒಡ್ಡಬೇಡಿ" ಎಂದು ಪೋಷಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಅಪ್ರಾಪ್ತರಿಗೆ ವಾಹನ ನೀಡುವುದು ಮೋಟಾರು ವಾಹನ ಕಾಯ್ದೆ ಪ್ರಕಾರ ಅಪರಾಧವಾಗಿದ್ದು, ಪೋಷಕರು ಮತ್ತು ವಾಹನ ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.