ಸಿದ್ದಾಪುರ:ಮಹಿಳೆ ಮೇಲೆ ಹಲ್ಲೆ, ಪ್ರಕರಣ ದಾಖಲು

Mar 14, 2026 - 14:15
 0  1.7k
ಸಿದ್ದಾಪುರ:ಮಹಿಳೆ ಮೇಲೆ ಹಲ್ಲೆ, ಪ್ರಕರಣ ದಾಖಲು
ಸಾಂದರ್ಭಿಕ ಚಿತ್ರ

ಸಿದ್ದಾಪುರ; ಅನಾಮಧೇಯ ಮಹಿಳೆ ಮೇಲೆ ಹಲ್ಲೆ ನಡೆಸಿದ ಆರೋಪದಡಿಯಲ್ಲಿ ವ್ಯಕ್ತಿಯೋರ್ವನ ಮೇಲೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿದ್ದಾಪುರ ಸಮೀಪದ ಇಂಜಲಗೆರೆಯ ಕಾಫಿ ತೋಟದಲ್ಲಿ ಹಿಂದಿ ಮಾತನಾಡುತ್ತಿರುವ ಮಹಿಳೆ ಒಬ್ಬಳಿಗೆ ವ್ಯಕ್ತಿ ಓರ್ವ ಕೋಲಿನಿಂದ ಹೊಡೆಯುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು.

 ಈ ಹಿನ್ನೆಲೆಯಲ್ಲಿ ಸಿದ್ದಾಪುರ ಪೊಲೀಸರು ತನಿಖೆ ನಡೆಸಿದ ಸಂದರ್ಭ ಹಲ್ಲೆ ನಡೆಸಿದ ವ್ಯಕ್ತಿ ಅರೆಕಾಡು ನಿವಾಸಿ ಇಸ್ಮಾಯಿಲ್ ಎಂದು ತಿಳಿದುಬಂದಿದ್ದು. ಹಲ್ಲೆ ನಡೆಸಿದ ಆರೋಪದ ಅಡಿಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಿಸಿ ಸಿದ್ದಾಪುರ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

What's Your Reaction?

Like Like 2
Dislike Dislike 0
Love Love 1
Funny Funny 1
Angry Angry 0
Sad Sad 1
Wow Wow 0