Kodagu

ಸಿದ್ದಾಪುರ: ಕಾಡಾನೆ ದಾಳಿಗೆ ಕಾಫಿ ತೋಟದ ಕಾವಲುಗಾರ ಬಲಿ

admincoorgdaily

ಸಿದ್ದಾಪುರ: ಕಾಡಾನೆ ದಾಳಿಗೆ ಕಾಫಿ ತೋಟದ ಕಾವಲುಗಾರ ಬಲಿ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ತೀವ್ರಗೊಂಡಿದ್ದು, ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಕಾಫಿ ತೋಟದಲ್ಲಿ ಪ್ರದೇಶದಲ್ಲಿ ಕಾಡಾನೆ ತುಳಿತಕ್ಕೆ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಂಭವಿಸಿದೆ.

 ಕಾಫಿ‌ ತೋಟದಲ್ಲಿ ಕಾವಲುಗಾರನಾಗಿ ಕೆಲಸ ನಿರ್ವಹಿಸುತ್ತಿದ್ದ ಲತೀಫ್( 65) ಮೃತ ದುರ್ದೈವಿ. ಘಟನೆಯ ಸುದ್ದಿ ಹರಡುತ್ತಿದ್ದಂತೆ ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಸೇರಿದ್ದು, ನಿರಂತರ ಆನೆ ದಾಳಿಯಿಂದ ಜೀವ ಭಯದಲ್ಲಿ ಬದುಕುತ್ತಿರುವುದಾಗಿ ಆಕ್ರೋಶ ವ್ಯಕ್ತಪಡಿಸಿದರು.

ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಈ ದುರ್ಘಟನೆಗೆ ಕಾರಣವೆಂದು ಆರೋಪಿಸಿದರು. ಮಾಹಿತಿ ದೊರಕುತ್ತಿದ್ದಂತೆಯೇ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.