ಸಿದ್ದಾಪುರ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ

ಸಿದ್ದಾಪುರ :- ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನ್ಮ ದಿನಾಚರಣೆಯನ್ನು ರೋಗಿಗಳಿಗೆ ಹಣ್ಣುಹಂಪಲು ನೀಡುವ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಕೆ.ಲೋಕೇಶ್ ಪ್ರಧಾನಿ ಮೋದಿಯವರು ದೇಶಕ್ಕೆ ಭ್ರಷ್ಟಾಚಾರ ರಹಿತ ಆಡಳಿತವನ್ನು ನೀಡಿ ಇಡೀ ವಿಶ್ವದ ಗಮನ ಸೆಳೆದು 3ನೇ ಭಾರಿ ಪ್ರಧಾನಿ ಪಟ್ಟ ಅಲಂಕರಿಸಿದ ಧೀಮಂತ ನಾಯಕ . ಇವರ ಜನ್ಮ ದಿನವನ್ನು ಆಚರಿಸುವುದು ಹೆಮ್ಮೆಯ ವಿಷಯವಾಗಿದೆ. ಸಿದ್ದಾಪುರ ಶಕ್ತಿಕೇಂದ್ರವು ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ರೋಗಿಗಳಿಗೆ ಹಣ್ಣುಹಂಪಲು ನೀಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿರುವುದು ಶ್ಲಾಘನೀಯ ಎಂದರು.
ಈ ಸಂದರ್ಭದಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ರುಪೇಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಆನಂದ, ಪೂರ್ಣಿಮಾ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ರೀನಾ ತುಳಸಿ,ಸುರೇಶ್ ಸೇರಿದಂತೆ ಕಾರ್ಯಕರ್ತರು ಹಾಜರಿದ್ದರು.