ಸಿದ್ದಾಪುರ:ಕೇರಳ ರಾಜ್ಯದ ಲಾಟರಿ ಮಾರಾಟ,ಪ್ರಕರಣ ದಾಖಲು

ಸಿದ್ದಾಪುರ:ಕೇರಳ ರಾಜ್ಯದ ಲಾಟರಿ ಮಾರಾಟ,ಪ್ರಕರಣ ದಾಖಲು

ಮಡಿಕೇರಿ, ಜೂ. 3: ಅಕ್ರಮವಾಗಿ ಲಾಟರಿ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ - ದಾಖಲಾಗಿದೆ.

ಸಿದ್ದಾಪುರ ಸಮೀಪದ ನೆಲ್ಲಿಹುದಿಕೇರಿ ಗ್ರಾಮದ ಬೆಟ್ಟದ ಕಾಡು ರಸ್ತೆಯಲ್ಲಿ ಕೇರಳ ರಾಜ್ಯದ ಲಾಟರಿ ಟಿಕೆಟ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಸುಳಿವಿನ ಮೇರೆಗೆ ಸಿದ್ದಾಪುರ - ಪೊಲೀಸರು ದಾಳಿ ನಡೆಸಿ ಲಾಟರಿ ಟಿಕೆಟ್ ಮಾರಾಟ ಮಾಡುತ್ತಿದ್ದ ರಾಜೇಶ್ ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನ ಬಳಿ ಇದ್ದ ಕೇರಳ ರಾಜ್ಯದ ಲಾಟರಿ ಟಿಕೆಟ್‌ಗಳನ್ನು ಹಾಗೂ ಟಿಕೆಟ್ ಮಾರಾಟದ - ನಗದು ಹಣವನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.