ಸಿದ್ದಾಪುರ:50ಲಕ್ಷ ವೆಚ್ಚದಲ್ಲಿ ಕರಡಿಗೋಡು ರಸ್ತೆ ಕಾಮಗಾರಿಗೆ ಶಾಸಕ ಎಎಸ್ ಪೊನ್ನಣ್ಣ ಚಾಲನೆ

Feb 10, 2026 - 12:27
 0  280
ಸಿದ್ದಾಪುರ:50ಲಕ್ಷ ವೆಚ್ಚದಲ್ಲಿ ಕರಡಿಗೋಡು ರಸ್ತೆ ಕಾಮಗಾರಿಗೆ ಶಾಸಕ ಎಎಸ್ ಪೊನ್ನಣ್ಣ ಚಾಲನೆ

ಸಿದ್ದಾಪುರ; ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮದ, ಕರಡಿಗೋಡಿಗೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆಯನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ನೆರವೇರಿಸಿದರು.

 ಸಿದ್ದಾಪುರ ಮುಖ್ಯ ಪಟ್ಟಣದ ಸೇಕ್ರೆಡ್ ಹಾರ್ಟ್ ಆಸ್ಪತ್ರೆ ಬಳಿಯಿಂದ ಕರಡಿಗೋಡು ಶ್ರೀ ಬಸವೇಶ್ವರ ದೇವಸ್ಥಾನದವರೆಗೆ ಹೋಗುವ ರಸ್ತೆಯ ಅಭಿವೃದ್ಧಿಗೆ ಮಾನ್ಯ ಶಾಸಕರು ₹ 50 ಲಕ್ಷ ಅನುದಾನ ಒದಗಿಸಿದ್ದಾರೆ.ಈ ಅನುದಾನದ ಕಾಮಗಾರಿ ಆರಂಭಗೊಳ್ಳಲು ಎಂದು ಭೂಮಿ ಪೂಜೆಯನ್ನು ನೆರವೇರಿಸಿ, ಅತಿ ಶೀಘ್ರದಲ್ಲೇ ಈ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕೆಂದು ಶಾಸಕರು ಶುಭ ಹಾರೈಸಿದರು. 

ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರು ಶ್ರೀ ಪಟ್ಟಡ ರಂಜಿ ಪೂಣಚ್ಚ, ವಲಯ ಅಧ್ಯಕ್ಷರು ಶ್ರೀ ಪ್ರತೀಶ್, ಕೆಪಿಸಿಸಿ ಕಾನೂನು ಘಟಕದ ಸದಸ್ಯರು ವೆಂಕಟೇಶ್, ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷರು ಮತೀನ್, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ಹನೀಫ್, ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ರಫೀಕ್, ಪಂಚಾಯಿತಿ ಅಧ್ಯಕ್ಷರು ಪ್ರೇಮ ಗೋಪಾಲ್, ಪಂಚಾಯಿತಿ ಸದಸ್ಯರು ಜಫರ್ ಆಲೀ, ದೇವಯಾನಿ, ಎಸ್ ಟಿ ಘಟಕದ ಅಧ್ಯಕ್ಷರು ಕರುಪ್ಪಯ್ಯ, ಚೆಕ್ಕು, ಅನಿಲ್, ಕುಂಡಚ್ಚಿರ ಮಂಜು ದೇವಯ್ಯ, ಮಾದೇವ, ಮಂಜುನಾಥ್, ಅಯೂಬ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0