ಸಿದ್ದಾಪುರ; ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

ಸಿದ್ದಾಪುರ; ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

ಸಿದ್ದಾಪುರ;ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆಸಿದ್ದಾಪುರ ಸಮೀಪದ ಗುಹ್ಯ ಗ್ರಾಮದಲ್ಲಿ ನಡೆದಿದೆ.ಸ್ನಾನ ಮಾಡಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು,ವಿರಾಜಪೇಟೆ ಸುಂಕದಕಟ್ಟೆ ನಿವಾಸಿ ನಾಗರಾಜು (41) ಮೃತ ದುರ್ದೈವಿ ಗ್ರಾಮಸ್ಥರ ನೆರವಿನೊಂದಿಗೆ ಮೃತದೇಹ ಹೊರ ತೆಗೆದಿದ್ದು, ಘಟನೆ ಸಂಬಂಧ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.