ಸಿದ್ದಾಪುರ: ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ: 30 ಸಾವಿರ ರೂ ದಂಡ
admincoorgdaily

ಮಡಿಕೇರಿ: ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ನೀಡಿ ಚಲಾಯಿಸಲು ಅವಕಾಶ ಮಾಡಿಕೊಟ್ಟ ಪ್ರಕರಣದಲ್ಲಿ ಸಿದ್ದಾಪುರ ಪೊಲೀಸ್ ಠಾಣೆಯ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದು, ಒಟ್ಟು 30 ಸಾವಿರ ರೂ. ದಂಡ ವಿಧಿಸಲಾಗಿದೆ.
ಅಪ್ರಾಪ್ತ ಬಾಲಕ ದ್ವಿಚಕ್ರ ವಾಹನ ಚಲಾಯಿಸಿದ ಪ್ರಕರಣದಲ್ಲಿ ಮಡಿಕೇರಿ ಪಿಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು 25,000 ರೂ. ದಂಡ ಹಾಗೂ ಬಾಲ ನ್ಯಾಯ ಸಮಿತಿಯು 5,000 ರೂ. ದಂಡ ವಿಧಿಸಿದ್ದು, ಒಟ್ಟು 30,000 ರೂ. ದಂಡವನ್ನು ಬಾಲಕನ ಪೋಷಕರಿಗೆ ವಿಧಿಸಲಾಗಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ತಿಳಿಸಿದೆ.