ಡಿಜಿ & ಐಜಿಪಿ ಕಮೆಂಡೇಷನ್ ಡಿಸ್ಕ್ ಪ್ರಶಸ್ತಿ ಸ್ವೀಕರಿಸಿದ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್

Jul 24, 2026 - 18:27
Jul 24, 2026 - 18:31
 0  80
ಡಿಜಿ & ಐಜಿಪಿ ಕಮೆಂಡೇಷನ್ ಡಿಸ್ಕ್ ಪ್ರಶಸ್ತಿ ಸ್ವೀಕರಿಸಿದ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್

ಸಿದ್ದಾಪುರ:-ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪ್ರತಿಷ್ಠಿತ ಡಿಜಿ & ಐಜಿಪಿ ಕಮೆಂಡೇಷನ್ ಡಿಸ್ಕ್ ಪ್ರಶಸ್ತಿಗೆ ಸಿದ್ದಾಪುರ ಪೊಲೀಸ್ ಠಾಣೆಯ ಠಾಣಾಧಿಕಾರಿ ಇ. ಮಂಜುನಾಥ್ ಭಾಜನರಾಗಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಪೊಲೀಸ್ ಮಹಾನಿರೀಕ್ಷಕರು (DGP & IGP) ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಿದರು. ಪೊಲೀಸ್ ಇಲಾಖೆಯಲ್ಲಿ ಕರ್ತವ್ಯನಿಷ್ಠೆ, ಉತ್ತಮ ಸೇವೆ ಹಾಗೂ ಸಾರ್ವಜನಿಕ ಸ್ನೇಹಿ ಪೊಲೀಸ್ ಕಾರ್ಯಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ.

ಮಂಜುನಾಥ್ ಅವರು ಸಿದ್ದಾಪುರ ಠಾಣೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ಮಾದಕ ವಸ್ತುಗಳ ವಿರುದ್ಧ ಜಾಗೃತಿ, ಸಂಚಾರ ಶಿಸ್ತು, ಶಾಲಾ-ಕಾಲೇಜುಗಳಲ್ಲಿ ಕಾನೂನು ಅರಿವು ಕಾರ್ಯಕ್ರಮಗಳು ಹಾಗೂ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಬೆಳೆಸುವ ಕಾರ್ಯಗಳಿಂದ ಮೆಚ್ಚುಗೆ ಗಳಿಸಿದ್ದಾರೆ. ಅವರಿಗೆ ಡಿಜಿ & ಐಜಿಪಿ ಕಮೆಂಡೇಷನ್ ಡಿಸ್ಕ್ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ, ಸಾರ್ವಜನಿಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಅಭಿನಂದನೆ ಸಲ್ಲಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 0