ಸಿದ್ದಾಪುರ: ಕಾಡಾನೆ ದಾಳಿಯಿಂದ ಕಾರ್ಮಿಕ ಸಾವು

Aug 17, 2026 - 11:01
 0  641
ಸಿದ್ದಾಪುರ: ಕಾಡಾನೆ ದಾಳಿಯಿಂದ ಕಾರ್ಮಿಕ  ಸಾವು

ಸಿದ್ದಾಪುರ: ಸಮೀಪದ ಘಟ್ಟದಳ್ಳದ ಶಿಲ್ಪಿ ತೋಟದಲ್ಲಿ ಇಂದು ಬೆಳಗ್ಗೆ ನಡೆದ ಆನೆ ದಾಳಿಯಲ್ಲಿ ಗೋಪಾಲ್ (45) ಎಂಬ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಬಂದ ಕಾಡಾನೆ ಗೋಪಾಲ್ ಅವರನ್ನು ತುಳಿದು ಹಾಕಿದೆ.

 ಈ ವೇಳೆ ಜೊತೆಯಲ್ಲಿದ್ದ ಜಾದವ್ ಎಂಬವರ ಮೇಲೂ ಆನೆ ದಾಳಿ ನಡೆಸಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಿಂದ ಸ್ಥಳದ ಕಾರ್ಮಿಕರು ಭಯಭೀತರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ತೋಟಗಳಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿರುವುದರಿಂದ ರೈತರು ಮತ್ತು ಕಾರ್ಮಿಕರು ಆತಂಕದಲ್ಲಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 1
Angry Angry 0
Sad Sad 1
Wow Wow 0