ಸಿದ್ದಾಪುರ: 9ತಿಂಗಳು ಕಳೆದರೂ ಕೂಡ ಅಭಿವೃದ್ಧಿಯಾಗದ ರಸ್ತೆ : ಕಾಮಗಾರಿ ಪ್ರಾರಂಭಿಸದಿದ್ದಲ್ಲಿ ಪ್ರತಿಭಟನೆ ಎಚ್ಚರಿಕೆ

ಸಿದ್ದಾಪುರ: 9ತಿಂಗಳು ಕಳೆದರೂ ಕೂಡ ಅಭಿವೃದ್ಧಿಯಾಗದ ರಸ್ತೆ : ಕಾಮಗಾರಿ ಪ್ರಾರಂಭಿಸದಿದ್ದಲ್ಲಿ  ಪ್ರತಿಭಟನೆ ಎಚ್ಚರಿಕೆ

ಸಿದ್ದಾಪುರ:-ವಿರಾಜಪೇಟೆ ತಾಲೂಕಿನ ಸಿದ್ದಾಪುರದಲ್ಲಿ ಅಂತರಾರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಕೊಣನೂರು-ಮಾಕುಟ್ಟ ರಾಜ್ಯ ಹೆದ್ದಾರಿಯ ಸಂಪರ್ಕದ ಸಿದ್ದಾಪುರ ಮುಖ್ಯ ರಸ್ತೆ 9 ತಿಂಗಳು ಕಳೆದರೂ ಕಾಮಗಾರಿ ಪೂರ್ಣವಾಗದೆ ಸಂಕಷ್ಟದಲ್ಲಿ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು ಏಳು ದಿನದಲ್ಲಿ ಕಾಮಗಾರಿ ಪ್ರಾರಂಭಿಸಿದ್ದಿದ್ದಲ್ಲಿ ಬೃಹತ್ ಪ್ರತಿಭಟನೆ ಹೋರಾಟ ನಡೆಸಬೇಕಾಗುತ್ತದೆ ಎಂದು ಅಂಬೇಡ್ಕರ್ ಸೇನೆ ಹಾಗೂ ವಾಹನ ಚಾಲಕರ ಸಂಘ ಎಚ್ಚರಿಸಿದ್ದಾರೆ.

 ರಸ್ತೆ ಅಭಿವೃದ್ಧಿಗಾಗಿ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ ಎಸ್ ಪೊನ್ನಣ್ಣ ನವೆಂಬ‌ರ್ ತಿಂಗಳಲ್ಲಿ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದ್ದರು ಇದೀಗ 9 ತಿಂಗಳು ಕಳೆದರೂ ಗುತ್ತಿಗೆದಾರರ ನಿರ್ಲಕ್ಷಯಿಂದ ರಸ್ತೆ ಕಾಮಗಾರಿ ವಿಳಂಬದಿಂದ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗುತ್ತಿದೆ ಎಂದು ಸ್ಥಳೀಯರು ಆರೂಪಿಸಿದರು. ಪಾಲಿಬೆಟ್ಟ ರಸ್ತೆಯಿಂದ ಅಯ್ಯಪ್ಪ ದೇವಸ್ಥಾನದವರೆಗೆ ಪಟ್ಟಣದ ಎರಡೂ ಬದಿ ಚರಂಡಿ ಮಾಡಲಾಗುತ್ತಿದ್ದು, ರಸ್ತೆ ಸಂಪೂರ್ಣ ಹೊಂಡ ಗುಂಡಿಗಳಿಂದ ಅವ್ಯತ್ತವಾಗಿ ಸಾರ್ವಜನಿಕರ ನೆಮ್ಮದಿಯ ಬದುಕಿಗೆ ಸಂಕಷ್ಟವನ್ನು ತಂದೊಡ್ಡಿದೆ. ರಸ್ತೆಗಳ ಅಭಿವೃದ್ಧಿ ಎನ್ನುವುದು ಮರೀಚಿಕೆಯಾಗಿದೆ ಮುಖ್ಯ ರಸ್ತೆಯಲ್ಲಿ ದಿನ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ ಈ ಸಂದರ್ಭ ವಾಹನ ಚಾಲಕರು ಹದಗೆಟ್ಟ ರಸ್ತೆಯಲ್ಲಿ ಸಂಚಾರಿಸಲು ಹರಸಾಹಸ ಪಡುವಂತಾಗಿದೆ ಸೇತುವೆ ನಿರ್ಮಾಣಕ್ಕೆ ಎಂದು ಬಾರಿ ಗಾತ್ರದ ಗುಂಡಿ ಒಂದನ್ನು ತೆಗೆಯಲಾಗಿದ್ದು ಪೈಪು ಅಳವಡಿಸದೆ ಹಾಗೆ ಬಿಡಲಾಗಿದೆ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೂ ಸಮಸ್ಯೆ ಆಗುತ್ತಿದ್ದು ಅಪಘಾತಕ್ಕೆ ಕಾರಣವಾಗುತ್ತಿದೆ ಮಳೆ ಸಂದರ್ಭದಲ್ಲಿ ರಸ್ತೆ ಗುಂಡಿ ಬಿದ್ದ ರಸ್ತೆಯೊಂದಿಗೆ ಕೆಸರು ತುಂಬಿಕೊಂಡು ಶಾಲೆ ವಿದ್ಯಾರ್ಥಿಗಳು ಸಾರ್ವಜನಿಕರು ಈ ರಸ್ತೆಯಲ್ಲಿ ಸಂಚರಿಸಲು ಭಯಪಡುತ್ತಾರೆ.

ಗುತ್ತಿಗೆದಾರ ಕೈಗೊಂಡಿರುವ ಕಾಮಗಾರಿ ಆಮೆ ವೇಗದಲ್ಲಿ ಸಾಗಿದ್ದು, ಅದನ್ನು ಪೂರ್ಣ ಗೊಳಿಸದೆ ಇರುವುದರಿಂದ ಸ್ಥಳೀಯರು ಹಾಗು ವಾಹನ ಸವಾರರು ಶಾಲಾ ವಿದ್ಯಾರ್ಥಿಗಳು ಸಂಚರಿಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಂಬೇಡ್ಕರ್ ಸೇನೆ ಜಿಲ್ಲಾಧ್ಯಕ್ಷ ಸತೀಶ್ ಅಸಮಾಧಾನ ವ್ಯಕ್ತಪಡಿಸಿ ಕಾಮಗಾರಿ ಪ್ರಾರಂಭಿಸಿ ಪೂರ್ಣಗೊಳಿಸದಿದ್ದಲ್ಲಿ ವಾಹನ ಚಾಲಕರು ಹಾಗೂ ವಿವಿಧ ಸಂಘ ಸಂಸ್ಥೆಗಳನ್ನು ಒಗ್ಗೂಡಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಸುತ್ತಮುತ್ತಲಿನ ನಿವಾಸಿಗಳು ಕಾಮಗಾರಿ ಪೂರ್ಣಗೊಳಿಸಲು ಹಲವು ಭಾರಿ ಒತ್ತಾಯ ಮಾಡಿದ್ದಾರೆ. ಇತ್ತೀಚೆಗೆ ಶಾಸಕರು ಭೇಟಿ ನೀಡಿ ಪರಿಶೀಲನೆ ನಡೆಸಿ ಕಾಮಗಾರಿ ಪೂರ್ಣ ಗೊಳಿಸಲು ಗುತ್ತಿಗೆದಾರರಿಗೆ ಸೂಚನೆ ನೀಡಿದ್ದಾರೆ . ಗುತ್ತಿಗೆದಾರ ಮಾತ್ರ ಆಮೆ ನಡೆಗೆಯ ರೀತಿಯಲ್ಲಿ ಕಾಮಗಾರಿ ಮಾಡುತ್ತಾರೆ. ಅಂದಾಜು ಒಂದು ಕಿಲೋಮೀಟರ್ ರಸ್ತೆಗೆ 9 ತಿಂಗಳು ಕಳೆದಿರು ಅಭಿವೃದ್ಧಿಯಾಗಿಲ್ಲ ಎಂದರೆ ಯಾರು ಕಾರಣ ಎಂದು ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕೂಡಲೇ ಗಮನಹರಿಸಿ ಕಾಮಗಾರಿ ಪೂರ್ಣಗೊಳಿಸಬೇಕೆಂದು ಒತ್ತಾಯ ಮಾಡಿದ್ದಾರೆ ಈ ಸಂದರ್ಭ ವಾಹನ ಚಾಲಕರ ಸಂಘದ ಅಧ್ಯಕ್ಷ ಸೂದನ ಸತೀಶ್, ಆಟೋ ಚಾಲಕರು ಸ್ಥಳೀಯರು ಹಾಜರಿದ್ದರು.