ಸಿದ್ದಾಪುರ: ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Aug 15, 2026 - 12:02
 0  20
ಸಿದ್ದಾಪುರ: ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಸಿದ್ದಾಪುರ: ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗಳು ಸಿದ್ದಾಪುರ, ಇಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತಿ ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಧ್ವಜಾರೋಹಣ ಕಾರ್ಯಕ್ರಮವನ್ನು ನಿವೃತ್ತ ಸೈನಿಕ ಬಾಚುರ ಎಸ್ ಪೂನಚ್ಚರವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮತ್ತೋರ್ವ ನಿವೃತ್ತ ಸೈನಿಕ ಪೆಮ್ಮoಡ ರವೀಂದ್ರರವರು ಹಾಜರಿದ್ದರು.ಕಾರ್ಯಕ್ರಮದ ಕೇಂದ್ರ ಬಿಂದುವಾಗಿ ಬಾಚುರ ಕಾಮವ್ವರವರು ಆಗಮಿಸಿದ್ದರು.

 ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತಾಧಿಕಾರಿಯಾದ ಶ್ರೀಮಾನ್ ಸುಧಾಕರ್ ರವರು ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಬಿ ಜಿ ಎಸ್ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಕಾಳೇಗೌಡ, ಸಂಸ್ಥೆಯ ವ್ಯವಸ್ಥಾಪಕರಾದ ಮಂಜುನಾಥ್ ರವರು, ಮುಖ್ಯ ಶಿಕ್ಷಕರು ಹಾಜರಿದ್ದರು.

ಸಂಸ್ಥೆಯ ಮಕ್ಕಳಿಂದ ದಿನದ ಮಹತ್ವದ ಕುರಿತು ಭಾಷಣ, ದೇಶ ಭಕ್ತಿ ಗೀತೆ ಗಾಯನ ಹಾಗೂ ದೇಶದ ಸ್ವಾತಂತ್ರದ ಮಹತ್ವವನ್ನು ಸಾರುವ ಗೀತೆಗಳಿಗೆ ನೃತ್ಯ ಪ್ರದರ್ಶನವು ನಡೆಯಿತು.ಕಾರ್ಯಕ್ರಮದಲ್ಲಿ ಸಂಸ್ಥೆಯ ವಿದ್ಯಾರ್ಥಿವೃಂದ, ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು, ಪೋಷಕರು ಹಾಜರಿದ್ದರು.ಕೊನೆಯಲ್ಲಿ ಸಂಸ್ಥೆಯ ವತಿಯಿಂದ ಮಕ್ಕಳಿಗೆ ಸಿಹಿ ಹಂಚಲಾಯಿತು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0