ಸಿದ್ದಾಪುರ :ಸಂತ ಅನ್ನಮ್ಮ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭ

Jan 18, 2026 - 10:49
 0  319
ಸಿದ್ದಾಪುರ :ಸಂತ ಅನ್ನಮ್ಮ ಶಾಲೆಯಲ್ಲಿ  ವಾರ್ಷಿಕ ಬಹುಮಾನ ವಿತರಣಾ ಸಮಾರಂಭ

ಸಿದ್ದಾಪುರ:ಸಂತ ಅನ್ನಮ್ಮ ಶಾಲೆ (ಸಿಬಿಎಸ್ಇ)ಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭವನ್ನು ಶನಿವಾರ ಅದ್ಧೂರಿಯಾಗಿ ಆಯೋಜಿಸಲಾಯಿತು. ವಿದ್ಯಾರ್ಥಿಗಳ ಶೈಕ್ಷಣಿಕ, ಕ್ರೀಡಾ ಹಾಗೂ ಸಹಪಠ್ಯ ಚಟುವಟಿಕೆಗಳ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ನಡೆದ ಈ ಸಮಾರಂಭವು ಸಂಭ್ರಮದಿಂದ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು (ಸಿಬಿಎಸ್ಇ)ಶಾಲೆಯ ಸಂಚಾಲಕಿ ಸಿಸ್ಟರ್ ಅರ್ಪಿತಾ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ವೆಂಕಟೇಶ್ ಎಂ.ಎಸ್., ವಕೀಲರು ಹಾಗೂ ನೋಟರಿ ಅವರು ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು, ಪರಿಶ್ರಮ ಮತ್ತು ಮೌಲ್ಯಾಧಾರಿತ ಶಿಕ್ಷಣದೊಂದಿಗೆ ಜೀವನದಲ್ಲಿ ಯಶಸ್ಸು ಸಾಧಿಸಬೇಕೆಂದು ಸಲಹೆ ನೀಡಿದರು.

ಗೌರವ ಅತಿಥಿಯಾಗಿ ಶ್ರೀಮತಿ ಪಟ್ಟಡ ವಿದ್ಯಾ ದೇವಯ್ಯ, ಲಯನ್ಸ್ ಕ್ಲಬ್‌ನ ಅಧ್ಯಕ್ಷರು ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಶುಭಾಶಯಗಳನ್ನು ಕೋರಿದರು ಹಾಗೂ ಶಿಕ್ಷಣದ ಜೊತೆಗೆ ಸಾಮಾಜಿಕ ಜವಾಬ್ದಾರಿಯ ಮಹತ್ವವನ್ನು ವಿವರಿಸಿದರು.

ಸಮಾರಂಭದಲ್ಲಿ ವಿವಿಧ ವಿಭಾಗಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ( CBSE) ಶಾಲೆಯ ಪ್ರಾಂಶುಪಾಲರಾದ  ಸಿಸ್ಟರ್ ಲೆನಿಟ್,ಹಾಗೂ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮಾರಂಭಕ್ಕೆ ಕಳೆ ನೀಡಿದರು.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 0