ಸಿದ್ದಾಪುರ:ಇತಿಹಾಸ ಪ್ರಸಿದ್ಧ ಶ್ರೀ ಅಯ್ಯಪ್ಪ ದೇವಾಲಯದ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಭೂಮಿ ಪೂಜೆ

Jul 16, 2026 - 10:41
 0  138
ಸಿದ್ದಾಪುರ:ಇತಿಹಾಸ ಪ್ರಸಿದ್ಧ ಶ್ರೀ ಅಯ್ಯಪ್ಪ ದೇವಾಲಯದ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಭೂಮಿ ಪೂಜೆ

ಸಿದ್ದಾಪುರ: ಸಿದ್ದಾಪುರದ ಇತಿಹಾಸ ಪ್ರಸಿದ್ಧ ಶ್ರೀ ಅಯ್ಯಪ್ಪ ದೇವಾಲಯದ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಭೂಮಿ ಪೂಜೆಯನ್ನು ನೆರವೇರಿಸಲಾಯಿತು.

 ಈ ಸಂದರ್ಭದಲ್ಲಿ ಶ್ರೀ ಅಯ್ಯಪ್ಪ ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ರಾದ ದೇವಣೀರ ಸುಜಯ್ ಮಾತನಾಡಿ ಸಿದ್ದಾಪುರದ ಇತಿಹಾಸ ಪ್ರಸಿದ್ಧ ಪ್ರಾಚೀನ ಕಾಲದ ಶ್ರೀ ಅಯ್ಯಪ್ಪ ದೇವಾಲಯದ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲು ಆಡಳಿತ ಮಂಡಳಿ ಹಾಗೂ ಭಕ್ತಾದಿಗಳು ಸೇರಿ ಯೋಜನೆಯನ್ನು ರೂಪಿಸಲಾಗಿದೆ ಎಂದರು.

ನೂತನವಾಗಿ ಪ್ರಾರಂಭಿಸುವ ಅಭಿವೃದ್ಧಿ ಕಾರ್ಯಗಳಲ್ಲಿ ದೇವಾಲಯದ ಮುಂಭಾಗದ ಹಳೆಯ ಮಳಿಗೆಗಳನ್ನು ತೆರವುಗೊಳಿಸಿ ನೂತನ ಮಳಿಗೆಗಳು ಹಾಗೂ ವೇದಿಕೆ ಸೇರಿದಂತೆ ಅರ್ಚಕರ ವಾಸದ ಕೊಠಡಿಗಳು, ಇನ್ನಿತರ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು .

 ಶ್ರೀ ಅಯ್ಯಪ್ಪ ದೇವಾಲಯದ ಅಭಿವೃದ್ಧಿ ಕಾರ್ಯಗಳಿಗೆ ಅಂದಾಜು ಸುಮಾರು ರೂ50 ಲಕ್ಷಕ್ಕೂ ಅಧಿಕ ವೆಚ್ಚ ತಗಲಲ್ಲಿದ್ದು ಈಗಾಗಲೇ ನಿರ್ಮಾಣ ಮಾಡುವ ಕಟ್ಟಡದ ನೀಲಿ ನಕ್ಷೆಯನ್ನು ರಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ದೊಡ್ಡ ಮೊತ್ತದ ವೆಚ್ಚ ತಗಲಲಿದ್ದು ಈ ಹಿನ್ನೆಲೆಯಲ್ಲಿ ದೇವಾಲಯದ ಅಭಿವೃದ್ಧಿ ಕಾರ್ಯಗಳಿಗೆ ದಾನಿಗಳು ಹಾಗೂ ಭಕ್ತಾದಿಗಳು ಸಹಕಾರವನ್ನು ನೀಡುವಂತೆ ಆಡಳಿತ ಮಂಡಳಿಯವರು ಮನವಿ ಮಾಡಿದ್ದಾರೆ. ಶಂಕುಸ್ಥಾಪನೆ ಸಂದರ್ಭದಲ್ಲಿ ಶ್ರೀ ಅಯ್ಯಪ್ಪ ದೇವಾಲಯ ಸಮಿತಿಯ ಕಾರ್ಯದರ್ಶಿ ಶ್ರೀನಿವಾಸ್ ಟಿ‌.ಕೆ. ಹಾಗೂ ಆಡಳಿತ ಮಂಡಳಿಯ ಪದಾಧಿಕಾರಿಗಳು, ಭಕ್ತಾದಿಗಳು ಹಾಜರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0