ಕೊಡವಾಮೆರ ಆರ ಬೇರ ಕಾರ್ಯಕ್ರಮ
ಮಡಿಕೇರಿ:-ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಕೊಡವ ಸಮಾಜ ಮೈಸೂರು ಇವರ ಸಹಯೋಗದಲ್ಲಿ ಆಗಸ್ಟ್, 23 ರಂದು ಬೆಳಗ್ಗೆ 9.30 ಗಂಟೆಯಿಂದ ಮೈಸೂರು ಕೊಡವ ಸಮಾಜದಲ್ಲಿ “ಕೊಡವಾಮೆರ ಆರ ಬೇರ” ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರು, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡ, ಮಡಿಕೇರಿ ವಿಧಾನಸಭಾ ಕ್ಷೇತ್ರ ಶಾಸಕರಾದ ಡಾ.ಮಂತರ್ ಗೌಡ, ಮೈಸೂರು, ಕೃಷ್ಣರಾಜ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಟಿ.ಎಸ್.ಶ್ರೀವತ್ಸವ್, ಕೊಡಗು-ಮೈಸೂರು ಕ್ಷೇತ್ರದ ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ತು ಸದಸ್ಯರಾದ ಮಂಡೇಪಂಡ ಸುಜಾ ಕುಶಾಲಪ್ಪ, ಕೆಪಿಸಿಸಿ ಯ ರಾಜ್ಯ ಪ್ರಚಾರ ಸಮಿತಿ ಉಪಾಧ್ಯಕ್ಷರಾದ, ಮಾಜಿ ವಿಧಾನ ಪರಿಷತ್ತು ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ, ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಮೈಸೂರು ಕೊಡವ ಸಮಾಜದ ಅಧ್ಯಕ್ಷರಾದ ಪೊಂಜಂಡ ಎ.ಗಣಪತಿ, ಮೈಸೂರು ಮಹಾ ನಗರಪಾಲಿಕೆ ಮಾಜಿ ಸದಸ್ಯರಾದ ಮಾಳೇಟಿರ ಸುಬ್ಬಯ್ಯ ಹಾಗೂ ಮೈಸೂರು ವಲಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ವಿ.ಎನ್.ಮಲ್ಲಿಕಾರ್ಜುನ ಸ್ವಾಮಿ ಭಾಗವಹಿಸಲಿದ್ದಾರೆ.
ಮಂಗಳೂರು ಬಲ್ಮಠ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಉಪನ್ಯಾಸಕರಾದ ಡಾ.ಬೋಡುಕುಟ್ಟಡ ರಾಧಿಕ ಕುಟ್ಟಪ್ಪ ಅವರು “ನಾ ಪುಟ್ಟ್‍ನ ಮಣ್ಣ್” ಎಂಬ ವಿಷಯದ ಬಗ್ಗೆ ವಿಚಾರ ಮಂಡಿಸಲಿದ್ದಾರೆ. ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ನಾಟಕ ಪ್ರದರ್ಶನ ಇರುತ್ತದೆ. ಅಕಾಡೆಮಿಯ ಸದಸ್ಯರಾದ ಕಂಬೆಯಂಡ ಡೀನಾ ಬೋಜಣ್ಣ ಸಂಚಾಲಕರಾಗಿ, ಪುತ್ತರಿರ ಪಪ್ಪು ತಿಮ್ಮಯ್ಯ, ಕೊಂಡಿಜಮ್ಮನ ಎಂ.ಬಾಲಕೃಷ್ಣ ಮತ್ತು ನಾಪಂಡ ಸಿ.ಗಣೇಶ್‍ನವರು ಸಹ ಸಂಚಾಲಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಅಕಾಡೆಮಿಯ ಸದಸ್ಯರುಗಳು ಭಾಗವಹಿಸಲಿದ್ದಾರೆ. ಅಕಾಡೆಮಿ ಪ್ರಕಟಿತ ಪುಸ್ತಕಗಳ ಪ್ರದರ್ಶನ ಹಾಗೂ ಮಾರಾಟ ಇರುತ್ತದೆ ಎಂದು ಪ್ರಕಟಣೆ ತಿಳಿಸಿದೆ.