ನಾಳೆ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಕಾರ್ಯಕ್ರಮ

ಮಡಿಕೇರಿ :-ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಮಾಜಿಕ ಭದ್ರತಾ ಮಂಡಳಿ, ಕಾರ್ಮಿಕ ಇಲಾಖೆ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಕೊಡಗು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಮಂಡಳಿಯ ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮವು ಸೆಪ್ಟೆಂಬರ್, 17 ರಂದು ಬೆಳಗ್ಗೆ 11 ಗಂಟೆಗೆ ನಗರದ ಹಿಲ್‍ಡೇಲ್ ರೆಸಾರ್ಟ್(ಕ್ರಿಸ್ಟಲ್ ಹಾಲ್), ನಡೆಯಲಿದೆ.
ಕಾರ್ಮಿಕ ಸಚಿವರಾದ ಸಂತೋಷ್.ಎಸ್.ಲಾಡ್, ಸಣ್ಣ ನೀರಾವರಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಕರ್ನಾಟಕ ವಿಧಾನ ಪರಿಷತ್‍ನ ನೈರುತ್ಯ ಪದವೀಧರ ಕ್ಷೇತ್ರದ ಶಾಸಕರಾದ ಡಾ.ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಕೊಡಗು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ಕಾರ್ಮಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ರಾಜ್ಯ ವಿಮಾ ಯೋಜನಾ ವೈದ್ಯಕೀಯ ಸೇವೆಗಳ ಕಾರ್ಮಿಕ ಆಯುಕ್ತರು ಹಾಗೂ ಆಯುಕ್ತರಾದ ಡಾ.ಎಚ್.ಎನ್.ಗೋಪಾಲಕೃಷ್ಣ, ಸಾರಿಗೆ ಇಲಾಖೆಯ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರಾದ ಎ.ಎಂ.ಯೋಗೀಶ್, ಕ.ಕ ಮತ್ತು ಇ.ನಿ.ಕಾಕ. ಮಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾರ್ಯದರ್ಶಿ ಡಿ.ಭಾರತಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಂಟಿ ಕಾರ್ಮಿಕ ಆಯುಕ್ತರು ಹಾಗೂ ಜಂಟಿ ಕಾರ್ಯದರ್ಶಿ ಡಾ.ಎಸ್.ಬಿ.ರವಿಕುಮಾರ, ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಕೊಡಗು ಉಪ ವಿಭಾಗದ ಕಾರ್ಮಿಕ ಅಧಿಕಾರಿ ಅವರು ತಿಳಿಸಿದ್ದಾರೆ.