ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಕಾರ್ಯಕ್ರಮ ಉದ್ಘಾಟನೆ

ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಅರಿವು ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ರವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.
ಮಡಿಕೇರಿ ನಗರದ ಕ್ರಿಸ್ಟಲ್ ಹಾಲ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ,ಸಾರಿಗೆ ಇಲಾಖೆ,ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಕೊಡಗು ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ವಹಿಸಿದ್ದರು.ಮುಖ್ಯ ಅತಿಥಿಯಾಗಿ ಸನ್ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಎ.ಎಸ್.ಪೊನ್ನಣ್ಣ ನವರು ರಾಜ್ಯ ಗ್ಯಾರೆಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಮೆಹರೋಜ್ ಖಾನ್,ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ನವರು ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಸಾವಿರಾರು ಕಾರ್ಮಿಕ ಪ್ರತಿನಿಧಿಗಳು ಹಾಗೂ ಕಾರ್ಮಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.